August 23, 2026

ಶಿರಾಲಿಯಲ್ಲಿ ಬೆಂಕಿಗೆ ಆಹುತಿಯಾಗಿ ವ್ಯಕ್ತಿ ದುರಂತ ಸಾವು

ಭಟ್ಕಳ: ತಾಲೂಕಿನ ಶಿರಾಲಿ ಸಮೀಪದ ಬೇರ್ಮುಮನೆ ಗ್ರಾಮದ ನಿವಾಸಿ ಲಚ್ಚಯ್ಯ ದುರ್ಗಪ್ಪ ನಾಯ್ಕ (65) ಅವರು ಬೆಂಕಿಯಿಂದ ಸುಟ್ಟು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಕುರಿತು ಮೃತರ ಪತ್ನಿ ಮಾಸ್ತಮ್ಮ ಲಚ್ಚಯ್ಯ ನಾಯ್ಕ (55) ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಆಗಸ್ಟ್ 6ರಂದು ಬೆಳಿಗ್ಗೆ 10.30ರಿಂದ ಸಂಜೆ 6.30ರ ನಡುವಿನ ಅವಧಿಯಲ್ಲಿ ಲಚ್ಚಯ್ಯ ಅವರು ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಬೇಸತ್ತು ಬೆಂಕಿ ಹಚ್ಚಿಕೊಂಡಿರಬಹುದು ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಉಲ್ಲೇಖಿಸಲಾಗಿದೆ.

ಅಸಹಜ ಸಾವು (UDR) ಪ್ರಕರಣ ದಾಖಲು:

ಮೃತರ ಸಾವಿನ ಕುರಿತು ಯಾವುದೇ ರೀತಿಯ ಸಂಶಯವಿಲ್ಲ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವರದಿ ಆಧರಿಸಿ ಮುಂದಿನ ತನಿಖೆ ಮುಂದುವರಿಯಲಿದೆ.

About The Author

error: Content is protected !!