

ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಮಾಲೀಕರಿಗೆ ಭಟ್ಕಳ ಹಿರಿಯ ಸಿವಿಲ್ ನ್ಯಾಯಾಲಯ ತಲಾ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:
ಟಗ್ಗರಗೋಡಿನ ಮೆಹಬೂಬ್ ಅಲಿ ರಸೂಲ್ ಸಾಬ್ ಸವಣೂರ್ ಹಾಗೂ ಜೈನುಲ್ಲಾಬಾದ್‌ನ ಅಬ್ದುಲ್ಲಾ ಹೇಬಳೆ ಎಂಬುವವರು ಅಪ್ರಾಪ್ತರಿಗೆ ತಮ್ಮ ದ್ವಿಚಕ್ರ ವಾಹನಗಳನ್ನು ಚಲಾಯಿಸಲು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ:
ಪ್ರಕರಣದ ತನಿಖೆ ನಡೆಸಿದ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಭರಮಪ್ಪ ಬೆಳಗಲಿ ಅವರು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 5 ಹಾಗೂ 199(ಎ) ಅಡಿಯಲ್ಲಿ ಭಟ್ಕಳ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಕಠಿಣ ಕಾನೂನು ಕ್ರಮದ ಎಚ್ಚರಿಕೆ:
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ, ತಲಾ ₹25,000 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ನೀಡುವ ಪೋಷಕರು ಹಾಗೂ ವಾಹನ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಟ್ಕಳ ಗ್ರಾಮೀಣ ಪೊಲೀಸರು ಎಚ್ಚರಿಸಿದ್ದಾರೆ.


About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ