

ಅಥಣಿ (ಬೆಳಗಾವಿ): ಸಿಇಐಆರ್ (CEIR) ಪೋರ್ಟಲ್ ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾದ ₹50 ಕಳೆದುಹೋದ ಮೊಬೈಲ್ ಫೋನ್ಗಳನ್ನು ಅಥಣಿ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಅವುಗಳ ನೈಜ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾದಂತೆ ಫೋನ್ಗಳು ಕಳೆದುಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಸಿಇಐಆರ್ (CEIR) ಪೋರ್ಟಲ್ ಉಚಿತ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚುವ ಕಾರ್ಯದಲ್ಲಿ ಯಶಸ್ವಿಯಾಗಿದೆ.

ಪೊಲೀಸ್ ಇಲಾಖೆಗೆ ಸಾರ್ವಜನಿಕರ ಕೃತಜ್ಞತೆ:
ಸದರಿ ವಿಶೇಷ ಕಾರ್ಯಾಚರಣೆಯ ಫಲವಾಗಿ ಪತ್ತೆಯಾದ 50 ಮೊಬೈಲ್ ಫೋನ್ಗಳನ್ನು (ದಿನಾಂಕ: 07-08-2026) ವಾರಸುದಾರರಿಗೆ ಮರಳಿಸಲಾಯಿತು. ತಮ್ಮ ಕಳೆದುಹೋದ ಮೊಬೈಲ್ಗಳನ್ನು ಮರಳಿ ಪಡೆದ ಸಾರ್ವಜನಿಕರು ಪೊಲೀಸ್ ಇಲಾಖೆಯ ಶ್ರಮ ಮತ್ತು ಸಿಇಐಆರ್ ಪೋರ್ಟಲ್ನ ತಂತ್ರಜ್ಞಾನಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಇನ್ನುಳಿದ ಕಳೆದುಹೋದ ಮೊಬೈಲ್ಗಳನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಕಾರ್ಯಾಚರಣೆ ನಡೆಸಿದ ತಂಡ:
ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ (IPS) ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್. ಬಿ. ಬಸರಗಿ ಹಾಗೂ ಅಥಣಿ ವಿಭಾಗದ ಡಿಎಸ್ಪಿ ಪ್ರಶಾಂತ್ ಜಿ. ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ, ಸಿಪಿಐ, ಪಿಎಸ್ಐ, ಎಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಈ ಕಾರ್ಯಚರಣೆ ನಡೆಸಿ ಮೊಬೈಲ್ಗಳನ್ನು ಪತ್ತೆಹಚ್ಚಿದೆ.


ಸಿಇಐಆರ್ ಪೋರ್ಟಲ್ ಬಳಕೆಗೆ ಸೂಚನೆ:
ಸಾರ್ವಜನಿಕರು ಮೊಬೈಲ್ ಕಳೆದುಕೊಂಡರೆ ತಕ್ಷಣವೇ ceir.gov.in ಪೋರ್ಟಲ್ಗೆ ಭೇಟಿ ನೀಡಿ ಅಗತ್ಯ ವಿವರಗಳನ್ನು ಸಲ್ಲಿಸಿ ಮೊಬೈಲ್ ಬ್ಲಾಕ್ ಹಾಗೂ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ. ವರದಿ: ಮಹೇಶ್ ಶರ್ಮಾ
About The Author




More Stories
ಅಥಣಿಯ ಶಿವಯೋಗಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಾವ: ಹೆದ್ದಾರಿಯಲ್ಲಿ ‘ಸ್ಪೀಡ್ ಬ್ರೇಕರ್’, ಶಾಲಾ ಮೇಲ್ದರ್ಜೆಗೆ ಸ್ಥಳೀಯರ ಉಗ್ರ ಆಗ್ರಹ.
ಅಥಣಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ರಾಜು ಡವರಿ ಅವರಿಂದ ಧ್ವಜಾರೋಹಣ
ಮದಭಾವಿಯಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ವೀರಯೋಧರಿಂದ ಜಂಟಿ ಧ್ವಜಾರೋಹಣ