August 23, 2026

ಅಥಣಿಯಲ್ಲಿ Anti-Crime and Anti-Corruption Bureau  ಸದಸ್ಯರಿಗೆ ಐಡಿ ಕಾರ್ಡ್ ವಿತರಣೆ

ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು, ಆಂಟಿ ಕ್ರೈಮ್ ಅಂಡ್ ಆಂಟಿ ಕರಪ್ಷನ್ ಬ್ಯೂರೋ (ಹೊಸದಿಲ್ಲಿ) ಘಟಕದ ವತಿಯಿಂದ ನೂತನ ಸದಸ್ಯರಿಗೆ ಅಧಿಕೃತ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸ್ಥೆಯ ಕರ್ನಾಟಕ ರಾಜ್ಯ ಉಸ್ತುವಾರಿ ಸಂಜೀವ್ ಗಿರಿ ಅವರು, “ಸಂಸ್ಥೆಯ ಸದಸ್ಯರು ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿ, ಕಾನೂನು ಅಡೆತಡೆಗಳನ್ನು ನಿವಾರಿಸುವ ಮೂಲಕ ಅವರಿಗೆ ಸೂಕ್ತ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಸಂಘಟನೆಯ ಹೆಸರಿನಲ್ಲಿ ಯಾರಾದರೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅಂತಹವರ ಸದಸ್ಯತ್ವವನ್ನು ತಕ್ಷಣದಿಂದಲೇ ರದ್ದುಗೊಳಿಸಲಾಗುವುದು,” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಹಲವು ಗಣ್ಯರ ಉಪಸ್ಥಿತಿ: ಈ ಕಾರ್ಯಕ್ರಮದಲ್ಲಿ ಅಬ್ದುಲ್ ಹಮೀದ್ ಗಡ್ಡೇಕರ್, ಮುನ್ನಾ ಎಚ್.ಎಂ. ಇನಾಮದಾರ್, ಖಲೀಫಾ, ಮಹಾದೇವ್, ರವಿ, ಬಸವರಾಜ, ರಾಜು, ಎಂ. ಎಂ. ಶರ್ಮಾ ಸೇರಿದಂತೆ ಸಂಘಟನೆಯ ಅನೇಕ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

About The Author

error: Content is protected !!