

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಂದ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಉಮೇಶ ಹೆಗಡೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ದೇಶದ ಗಡಿಯಲ್ಲಿ ಅಪಾರ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಾದ ಶಾಂತರಾಮ ಶಿವ ಭಟ್ಕರೆ ಹಾಗೂ ಪ್ರಶಾಂತ ನಾಯ್ಕ ಅವರನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಬಳಿಕ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ನೃತ್ಯ ರೂಪಕಗಳು ನೆರೆದಿದ್ದವರ ಗಮನ ಸೆಳೆದವು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ವಿ.ಜಿ. ಹೆಗಡೆ ಗುಡ್ಗೆ, ಕಾರ್ಯದರ್ಶಿ ಮೋಹನ ಹೆಗಡೆ ಹಾಗೂ ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಉಪಸ್ಥಿತರಿದ್ದರು.
ಶಿಕ್ಷಕಿ ಅಂಜನಾ ಶೆಟ್ಟಿ ಸ್ವಾಗತಿಸಿದರು, ವಿನಯಾ ಶೆಟ್ಟಿ ವಂದಿಸಿದರು, ರೇಷ್ಮಾ ಜೊಗಳೆಕರ್ ಹಾಗೂ ರಮ್ಯಾ ಭಟ್ ನಿರೂಪಿಸಿದರು.
About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.