

ಭಟ್ಕಳ ;ಹೊನ್ನಾವರ ಕ್ಷೇತ್ರದ ಶಾಸಕರಾಗಿ ಹಾಗೂ ಮಾಜಿ ಸಚಿವರಾಗಿದ್ದ ಮಂಕಾಳ ಎಸ್. ವೈದ್ಯ ಅವರು ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ವಿಧಾನಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ರಾತ್ರಿ ಕ್ಷೇತ್ರಕ್ಕೆ ಆಗಮಿಸಿದ ಮಂಕಾಳ ವೈದ್ಯ ಅವರನ್ನು ಭಟ್ಕಳದ ಗಡಿಭಾಗವಾದ ಶಿರೂರು ಟೋಲ್ ಬಳಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿದರು.

ನೂರಾರು ಮಂದಿ ಹಾರ, ಪುಷ್ಪಗುಚ್ಛ ನೀಡಿ ಜಯಘೋಷಗಳೊಂದಿಗೆ ಅವರನ್ನು ಬರಮಾಡಿಕೊಂಡರು. ಟೋಲ್ ಬಳಿ ಕೆಲಕಾಲ ಹಬ್ಬದ ವಾತಾವರಣ ಕಂಡುಬAತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, “ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಂಥ ಉನ್ನತ ಸ್ಥಾನಕ್ಕೇರಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿ” ಎಂದು ಸಂತೋಷ ವ್ಯಕ್ತಪಡಿಸಿದರು.

ಮಂಕಾಳ ಎಸ್. ವೈದ್ಯರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಶಾಸಕರಾಗಿ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಅನುಭವವಿದೆ. ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ ನಾಯಕ ಎಂಬ ಹೆಗ್ಗಳಿಕೆಯನ್ನು ಅವರು ಗಳಿಸಿದ್ದಾರೆ. ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ವಿಧಾನಸಭೆಯ ಕಲಾಪಗಳನ್ನು ನಿಯಮಬದ್ಧವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಮಹತ್ವದ ಜವಾಬ್ದಾರಿ ಅವರ ಹೆಗಲೇರಿದೆ. ಭಟ್ಕಳ ಹೊನ್ನಾವರ ಕ್ಷೇತ್ರದ ಜನಪ್ರತಿನಿಧಿಯೊಬ್ಬರು ಈ ಉನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾಗಿರುವುದು ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಕಾಳ ಎಸ್. ವೈದ್ಯರು, “ಈ ಗೌರವ ನನ್ನೊಬ್ಬರದ್ದಲ್ಲ, ಕ್ಷೇತ್ರದ ಪ್ರತಿಯೊಬ್ಬ ಮತದಾರರ ವಿಶ್ವಾಸದ ಪ್ರತಿಫಲ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು ಉಪಸಭಾಧ್ಯಕ್ಷರ ಜವಾಬ್ದಾರಿಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿ ಹಾಗೂ ರಾಜ್ಯದ ಜನರ ಹಿತಕ್ಕಾಗಿ ಹಿಂದಿನAತೆಯೇ ಶ್ರಮಿಸುತ್ತೇನೆ” ಎಂದು ಹೇಳಿದರು.
ಇದರಿಂದ ಕ್ಷೇತ್ರದ ಜನರಲ್ಲಿ ಹೊಸ ಉತ್ಸಾಹ ಮೂಡಿದ್ದು, ಎಲ್ಲೆಡೆ ಅಭಿನಂದನೆಗಳ ಸುರಿಮಳೆ ಹರಿದುಬರುತ್ತಿದೆ. ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಹಾದಿ ತೆರೆಯುವ ನಿರೀಕ್ಷೆ ಎಲ್ಲೆಡೆ ವ್ಯಕ್ತವಾಗುತ್ತಿದೆ.


About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ
ಚಿತ್ರಾಪುರ ಶ್ರೀವಲಿ ಹೈಸ್ಕೂಲ್ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ