

ಹೊನ್ನಾವರ: ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ನಾಯಕರು ಎಂದು ತಹಶೀಲ್ದಾರ್ ಪ್ರವೀಣ ಕರಾಂಡೆ ಅಭಿಪ್ರಾಯಪಟ್ಟರು.

ತಾಲೂಕಿನ ಪ್ರಭಾತನಗರದ ಡಿ. ದೇವರಾಜ ಅರಸು ವಸತಿನಿಲಯದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭೂಸುಧಾರಣೆ ಹಾಗೂ ಶೈಕ್ಷಣಿಕ ಕ್ರಾಂತಿ:
ಕಾರ್ಯಕ್ರಮದಲ್ಲಿ ಶುಭನುಡಿಗಳನ್ನಾಡಿದ ತಹಶೀಲ್ದಾರರು, “ಹಿಂದುಳಿದ ಸಮುದಾಯಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಅರಸು ಅವರು, ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಲಕ್ಷಾಂತರ ಉಳುವ ರೈತರಿಗೆ ಭೂಮಿಯ ಮಾಲೀಕತ್ವ ದೊರಕಿಸಿಕೊಟ್ಟರು. ಬಡವರ ಏಳಿಗೆಗಾಗಿ ಅನೇಕ ಜನಪರ ಯೋಜನೆಗಳನ್ನು ರೂಪಿಸಿ ಅವರ ಬದುಕಿಗೆ ಬೆಳಕಾಗಿದ್ದರು,” ಎಂದು ಸ್ಮರಿಸಿದರು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಯೇಸು ಸುಬ್ಬಣ್ಣ ಮಾತನಾಡಿ, “ಅರಸು ಅವರು ದೀನ-ದಲಿತರ ಮತ್ತು ಹಿಂದುಳಿದ ವರ್ಗಗಳ ನಿಜವಾದ ಆಶಾಕಿರಣವಾಗಿದ್ದರು. ನಾವು ಯಾವುದೇ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದರೂ ಸಮಾಜಕ್ಕೆ ಧನಾತ್ಮಕ ಕೊಡುಗೆ ನೀಡಬೇಕು ಎಂಬುದಕ್ಕೆ ಅವರ ಬದುಕು ಮಾದರಿಯಾಗಿದೆ,” ಎಂದರು.


ಪ್ರತಿಭಾವಂತರಿಗೆ ಸನ್ಮಾನ & ಗಣ್ಯರ ಉಪಸ್ಥಿತಿ:
ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಸತಿನಿಲಯದ ಅಭಿವೃದ್ಧಿಗೆ ಸಹಕರಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಅಣ್ಣಪ್ಪ ನಾಯ್ಕ ವಹಿಸಿದ್ದರು.
ವೇದಿಕೆಯಲ್ಲಿ ಸಿಡಿಪಿಒ ವನಿತಾ ದೇಶಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಭಜಂತ್ರಿ, ಹೆಸ್ಕಾಂ ಇಲಾಖೆಯ ಶಂಕರ್ ಗೌಡ, ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ, ನರೇಗಾ ಸಹಾಯಕ ನಿರ್ದೇಶಕ ಕಿರಣಕುಮಾರ, ಕರವೇ ಅಧ್ಯಕ್ಷ ಮಂಜುನಾಥ ಗೌಡ ಹಾಗೂ ವಸತಿನಿಲಯದ ವಾರ್ಡನ್ ಸ್ವಾತಿ ನಾಯ್ಕ ಉಪಸ್ಥಿತರಿದ್ದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಕೆ. ಗಣಪತಿ ಸ್ವಾಗತಿಸಿದರೆ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಧೀಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ಇಡುಗುಂಜಿ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ದೀಪಗಳು ಬಂದ್: ಜರೂರು ದುರಸ್ತಿಗೆ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರಿಗೆ ತಾ.ಪಂ. ಪತ್ರ