

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ (SC/ST Prevention of Atrocities Act) ಅನುಷ್ಠಾನದ ಕುರಿತು ‘ನೈರುತ್ಯ ಆರ್ಟ್ ಮೀಡಿಯಾ ಸಂಸ್ಥೆ’ (ಬೆಂಗಳೂರು) ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೌಲ್ಯಮಾಪನ ಅಧ್ಯಯನದ ಭಾಗವಾಗಿ, ಬೆಳಗಾವಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರ ನೇತೃತ್ವದಲ್ಲಿ ಸಂತ್ರಸ್ತರೊಂದಿಗೆ ವಿಶೇಷ ಗುಂಪು ಚರ್ಚೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಸಭೆಯಲ್ಲಿ ಕಾಯಿದೆಯ ಪರಿಣಾಮಕಾರಿ ಅನುಷ್ಠಾನ, ಸಂತ್ರಸ್ತರಿಗೆ ತಲುಪುತ್ತಿರುವ ಸರ್ಕಾರಿ ಸೌಲಭ್ಯಗಳು ಹಾಗೂ ಕಾನೂನು ನೆರವಿನ ಕುರಿತು ವಿಸ್ತೃತವಾಗಿ ಚರ್ಚಿಸಿ ಸಮಸ್ಯೆಗಳನ್ನು ಆಲಿಸಲಾಯಿತು.

ಚರ್ಚೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಕಾನೂನು ತಜ್ಞರು ಸಂತ್ರಸ್ತರೊಂದಿಗೆ ನೇರ ಮಾತುಕತೆ ನಡೆಸಿ ಕಾಯಿದೆಯ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಚನ್ನಯ್ಯನವರ್, ಪತ್ರಾಂಕಿತ ವ್ಯವಸ್ಥಾಪಕ ಎಂ.ಬಿ. ಹೊಸಮನಿ, ಡಿಸಿಆರ್‌ಇ (DCRE) ಪೊಲೀಸ್ ಇಲಾಖೆಯ ಅಧಿಕಾರಿ ರಂಜಿತ ಗಿಲ್ ಹಾಗೂ ವಕೀಲರಾದ ಎ.ಡಿ. ಕೋಳಿ ಅವರು ಉಪಸ್ಥಿತರಿದ್ದು, ಸಂತ್ರಸ್ತರ ಅಳಲು ಆಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.


ನೈರುತ್ಯ ಆರ್ಟ್ ಮೀಡಿಯಾ ಸಂಸ್ಥೆಯ ಬೆಳಗಾವಿ ಪ್ರತಿನಿಧಿ ವೈಶಾಲಿ (ಗೀತಾ) ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯಾದ ರಾಜಶೇಖರ್ ಲಟ್ಟಿ, ಮೋಹನ್ ದುಗಾಡೆ, ಪ್ರಜ್ವಲ್ ಕೋಲಕರ ಹಾಗೂ ದೌರ್ಜನ್ಯ ಕಾಯಿದೆಯ ಹಲವು ಸಂತ್ರಸ್ತರು ಉಪಸ್ಥಿತರಿದ್ದು ಸಭೆಯ ಯಶಸ್ಸಿಗೆ ಸಹಕರಿಸಿದರು.
ವರದಿ: ಮಹೇಶ್ ಶರ್ಮಾ
About The Author




More Stories
ಕೂಡ್ಲಿಗಿಯಲ್ಲಿ ಒಣಗಿದ ಬೆಳೆ ವೀಕ್ಷಿಸಿದ ಸಚಿವ ಜಮೀರ್: ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ಶಿಫಾರಸು ಭರವಸೆ
ಅಥಣಿ ಬೆನ್ನೇಪೇಟೆಯಲ್ಲಿ ಮಹಿಳೆಯರಿಗೆ ಶೌಚಾಲಯವಿಲ್ಲದೆ ಪರದಾಟ: ಶಾಸಕ ಲಕ್ಷ್ಮಣ್ ಸವದಿಗೆ ಜೆಡಿಎಸ್ ಮುಖಂಡ ಇಮ್ತಿಯಾಜ್ ಹಿಪ್ಪರಗಿ ಮನವಿ
ಅಪಾಯಕಾರಿ ಚರಂಡಿ ಮುಚ್ಚಳಿಕೆ ಸರಿಪಡಿಸಲು ಆಗ್ರಹ — ಪುರಸಭೆ ಹಾಗೂ ತಹಶೀಲ್ದಾರರಿಗೆ ಮತ್ತೆ ಮನವಿ