September 8, 2026

ಭಟ್ಕಳದಲ್ಲಿ ಅದ್ದೂರಿ ಮೀಲಾದ್ ಮೆರವಣಿಗೆ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರ 1501ನೇ ಜಯಂತಿ ಅಂಗವಾಗಿ ಭಟ್ಕಳ ಮರ್ಕಝಿ ಮೀಲಾದ್ ಕಮಿಟಿ ವತಿಯಿಂದ ನಗರದಲ್ಲಿ ಬೃಹತ್ ಮೀಲಾದ್ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಫೈಝೆ ರಸೂಲ್, ಬಝ್ಮೆ ಫೈಝೆ ರಸೂಲ್, ತಾಜುಶ್ಶುನ್ನತ್ ಹಾಗೂ ಎಸ್‌ಎಸ್‌ಎಫ್ ಸೇರಿದಂತೆ ವಿವಿಧ ಸಂಘಟನೆಗಳ ಸಾವಿರಾರು ಮಂದಿ ಈ ಆಚರಣೆಯಲ್ಲಿ ಪಾಲ್ಗೊಂಡರು.

ಬಂದರ್ ರಸ್ತೆಯ ಈದ್ಗಾ ಮೈದಾನದಿಂದ ಆರಂಭಗೊಂಡ ಮೆರವಣಿಗೆಯು ಶಮ್ಸುದ್ದೀನ್ ವೃತ್ತ, ಅರ್ಬನ್ ಬ್ಯಾಂಕ್, ಸುಲ್ತಾನ್ ಸ್ಟ್ರೀಟ್ ಮತ್ತು ಚೌಕ್ ಬಜಾರ್ ಮೂಲಕ ಸಾಗಿ, ಹಳೆ ಬಸ್ ನಿಲ್ದಾಣದ ಸಾರ್ವಜನಿಕ ಮೈದಾನದಲ್ಲಿ ಮುಕ್ತಾಯಗೊಂಡಿತು.

ಪ್ರವಾದಿಯವರ ಸಂದೇಶ ಸಾರುವ ಬಾವುಟಗಳು, ಧರ್ಮಧ್ವಜಗಳು, ಮಕ್ಕಳ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸ್ತಬ್ಧಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದವು.

ಮರ್ಕಝಿ ಮೀಲಾದ್ ಕಮಿಟಿ ಸಂಚಾಲಕ ಮುನೀರ್ ಅಹ್ಮದ್ ನೇತೃತ್ವ ವಹಿಸಿದ್ದರು. ಖಾಜಾ ಹಸನ್ ಕಲಾಯಿವಾಲೆ, ಅಬ್ದುಲ್ ಅಲೀಮ್ ಗವಾಯಿ, ಇಸ್ಮಾಯಿಲ್ ಹಬೀಬುಲ್ಲಾಹ್, ಡಾ. ಯಾಹ್ಯಾ ಅಸ್ಕರಿ, ಆಸಿಫ್ ಇಕ್ಬಾಲ್, ಮೌಲಾನಾ ಫೈಝಾನ್ ರಝಾ, ನವಾಝ್ ಶಿರಾಲಿ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ ಎಂ.ಎನ್. ಹಾಗೂ ಹೆಚ್ಚುವರಿ ಎಸ್‌ಪಿ ಎಂ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಿರೀಶ್, ಸಿಪಿಐ ದಿವಾಕರ ಪಿ.ಎಂ. ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

    About The Author

    error: Content is protected !!