ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ಮುಟ್ಟಳ್ಳಿ ಬೈಪಾಸ್ ಸಮೀಪ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಬರುತ್ತಿದ್ದ ಕಾರನ್ನು ಚಾಲಕ ಸುಶಾಂತ್ ಕುಮಾರ್ (ಮಣಿಪುರ, ಉಡುಪಿ ಜಿಲ್ಲೆ) ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಭಟ್ಕಳದಿಂದ ಸರ್ಪನಕಟ್ಟೆ ಕಡೆಗೆ ತೆರಳುತ್ತಿದ್ದ ಬಜಾಜ್ ಪಲ್ಸರ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಯಲ್ವಡಿಕವೂರಿನ ಬೈಕ್ ಸವಾರ ಲೋಕೇಶ್ ಮಂಜುನಾಥ ನಾಯ್ಕ (20) ತಲೆ, ಹಣೆ, ಕಾಲು, ಸೊಂಟ ಹಾಗೂ ಕೈ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಮತ್ತು ಬೈಕ್ ಎರಡೂ ವಾಹನಗಳು ಹಾನಿಗೊಳಗಾಗಿವೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ