September 8, 2026

ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ನಗರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಪತ್ರಿಕಾರಂಗವನ್ನು ಬಲಪಡಿಸುವ ಹಾಗೂ ಪತ್ರಕರ್ತರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ‘ಕರ್ನಾಟಕ ಪ್ರೆಸ್ ಕ್ಲಬ್ (ರಿ)’ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ, ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲಾಗಿದೆ. ಜಿಲ್ಲಾಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸು ಹಾಗೂ ರಾಜ್ಯ ಮಟ್ಟದ ಕಾರ್ಯಕಾರಿ ಮಂಡಳಿಯ ಅನುಮೋದನೆಯಂತೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ನೂತನ ಪದಾಧಿಕಾರಿಗಳು:

ಕಾರ್ಯಾಧ್ಯಕ್ಷರು: ಆರ್. ಶಿವಕುಮಾರ್ (ಹಿರಿಯ ಪತ್ರಕರ್ತರು, ‘ಶಿವಶಕ್ತಿ’ ಪತ್ರಿಕೆ)

ಖಜಾಂಚಿ: ಮಲ್ಲೇಶ್ ಗೌಡ

ಜಿಲ್ಲಾ ಸಮಿತಿ ಸದಸ್ಯರು: ಚೇತನ ಹಾಗೂ ಮಹೇಶ್

ಗಣ್ಯರ ಉಪಸ್ಥಿತಿ: ರಾಜ್ಯಾಧ್ಯಕ್ಷ ಎಸ್. ರಾಮಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ‘ಪೊಲೀಸ್ ವಾರ್ತೆ’ ಸಂಪಾದಕ ಸುಭಾಷ್ ಆರ್. ಶೆಟ್ಟಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿ ಶುಭ ಹಾರೈಸಿದರು.

ಪ್ರಮುಖ ಉದ್ದೇಶಗಳು: ಪತ್ರಕರ್ತರು ಎದುರಿಸುವ ಸಮಸ್ಯೆಗಳಿಗೆ ಸ್ಪಂದಿಸಿ ನೆರವು ನೀಡುವುದು, ಸಂಘಟನೆಯನ್ನು ಬಲಪಡಿಸುವುದು, ಬಡ ಹಾಗೂ ದುರ್ಬಲ ವರ್ಗದವರ ದ್ವನಿಯಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವುದು ಮತ್ತು ಪತ್ರಿಕಾ ಧರ್ಮದ ಮೌಲ್ಯಗಳನ್ನು ಎತ್ತಿಹಿಡಿಯುವುದು.

    About The Author

    error: Content is protected !!