ಶಿರಸಿ: ಬೇಡ್ತಿ ಹಾಗೂ ಅಘನಾಶಿನಿ ನದಿ ತಿರುವು ಯೋಜನೆಯ ವಿರುದ್ಧದ ಹೋರಾಟವನ್ನು ಸಮರೋಪಾದಿಯಲ್ಲಿ ತೀವ್ರಗೊಳಿಸುವುದು ಅನಿವಾರ್ಯ ಎಂದು ಶ್ರೀಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಕರೆ ನೀಡಿದ್ದಾರೆ. ಸ್ವರ್ಣವಲ್ಲೀ ಮಠದಲ್ಲಿ ನಡೆದ ನದಿ ತಿರುವು ಯೋಜನೆ ವಿರೋಧಿ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ತೀರ್ಮಾನಗಳು ಹಾಗೂ ಹೋರಾಟದ ಹಾದಿ:
- ಸೆಪ್ಟೆಂಬರ್ 3: ಗೋಕರ್ಣ ಮತ್ತು ಕಾರವಾರ ಚಲೋ.
- ಅಕ್ಟೋಬರ್ 2: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ.
- ರಾಸ್ತಾ ರೋಖೋ: ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಚಳುವಳಿ ಹಾಗೂ ಜೊತೆಗೆ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಯಿತು.
- ವಿಜ್ಞಾನಿಗಳ ಬಳಿ ಉತ್ತರವಿರಲಿಲ್ಲ: ಬೆಂಗಳೂರಿನಲ್ಲಿ NWDA ವಿಜ್ಞಾನಿಗಳೊಂದಿಗೆ ನಡೆದ ಚರ್ಚೆಯಲ್ಲಿ ನಮ್ಮ ತಜ್ಞರ ಪ್ರಶ್ನೆಗಳಿಗೆ ಆ ಸಂಸ್ಥೆಯ ವಿಜ್ಞಾನಿಗಳು ನಿರುತ್ತರರಾದರು ಎಂದು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.
- ಜನಪ್ರತಿನಿಧಿಗಳಿಗೆ ಆಗ್ರಹ: ಯೋಜನೆಯ ಡಿಪಿಆರ್ (DPR) ಸಿದ್ಧಪಡಿಸದಂತೆ ಜಿಲ್ಲೆಯ ಜನಪ್ರತಿನಿಧಿಗಳು ಒಮ್ಮತದಿಂದ ತಮ್ಮ ಗಟ್ಟಿ ನಿಲುವನ್ನು ಪ್ರದರ್ಶಿಸಬೇಕೆಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ಸಭೆಯಲ್ಲಿ ವಿಶ್ವನಾಥ ಶೀಗೆಹಳ್ಳಿ, ಪ್ರಮೋದ್ ವೈದ್ಯ ಮತ್ತಿಘಟ್ಟ, ನೆಲೆಮಾವು ಮಠದ ಅಧ್ಯಕ್ಷ ಜಿ.ಎಂ. ಹೆಗಡೆ ಹೆಗ್ನೂರು, ಹಿರಿಯ ಸಹಕಾರಿ ಎನ್.ವಿ. ಹೆಗಡೆ ಮುತ್ತಿಗೆ, ಜಿ.ಆರ್. ಹೆಗಡೆ ಬೆಳ್ಳೇಕೆರಿ, ಶಿವಾನಂದ ಕಳವೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸುರೇಶ ಹಕ್ಕಿಮನೆ ಸ್ವಾಗತಿಸಿ, ಅನಂತ ಭಟ್ ಹುಳಗೋಳ ವಂದಿಸಿದರು.
About The Author


More Stories
ಕಸ್ತೂರಿ ರಂಗನ್ ವರದಿ: ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆ ಹಾಗೂ ಜನವಸತಿ ಪ್ರದೇಶ ಮುಕ್ತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ವರದಿ ತಿರಸ್ಕರಿಸಲು ಹಕ್ಕು ಒತ್ತಾಯ
ಮದ್ದಲೆಯಲ್ಲಿ ನಂಬರ್ ೧ ಶಂಕರ ಭಾಗವತ್: ಉಮಾಕಾಂತ ಭಟ್ಟ ಕೆರೇಕೈ