ಭಟ್ಕಳ: ನಗರದ ಮುಗ್ಧುಂಕಾಲೋನಿ ಶಾಹೀನ್ ಗ್ರೌಂಡ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಶಹರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರನ್ನು ಹುರುಳಿ ಸಾಲ ನಿವಾಸಿ ಮೊಹಮ್ಮದ್ ಸಿಮ್ರಾನ್ (29), ಜಾಲಿ ಶಿರಕುಳಿ ಹೊಂಡ ನಿವಾಸಿ ಮೊಹಮ್ಮದ್ ಅಖೀಲ್ (25) ಹಾಗೂ ಚೌಥನಿ ಬ್ರಿಡ್ಜ್ ಸಮೀಪದ ನಿವಾಸಿ ಮೊಹಮ್ಮದ್ ಇಮ್ರಾನ್ (25) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ₹10 ಸಾವಿರ ಮೌಲ್ಯದ 146 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ₹70 ಸಾವಿರ ಮೌಲ್ಯದ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹80 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಕಾಲೇಜು ಬ್ಯಾಗ್‌ನಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಇರಿಸಿದ್ದ ಗಾಂಜಾವನ್ನು ಸಣ್ಣ ಜಿಪ್‌ಲಾಕ್ ಕವರ್‌ಗಳಿಗೆ ಹಾಕಿ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಸಂಬಂಧ ಭಟ್ಕಳ ಶಹರ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ ಎಂ.ಎನ್., ಹೆಚ್ಚುವರಿ ಎಎಸ್ಪಿ ಎಂ. ಕೃಷ್ಣಮೂರ್ತಿ ಹಾಗೂ ಡಿವೈಎಸ್ಪಿ ಗಿರೀಶ್ ಬಿ. ಮಾರ್ಗದರ್ಶನದಲ್ಲಿ, ಸಿಪಿಐ ದಿವಾಕರ ಪಿ.ಎಂ., ಪಿಎಸ್‌ಐ ನವೀನ್ ಎಸ್. ನಾಯ್ಕ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ