ಹೊನ್ನಾವರ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಮಹಾರಾಜರ ವಾರ್ಷಿಕ ಪಟ್ಟಾಭಿಷೇಕ ವರ್ಧಂತಿ ಮಹೋತ್ಸವವು ಸೆಪ್ಟೆಂಬರ್ 3, 2026ರ ಗುರುವಾರದಂದು ವೈಭವದಿಂದ ನೆರವೇರಲಿದೆ.
ಪೂಜ್ಯಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತಿರುವ ಬೈಂದೂರಿನ ಗೋಳಿಹೊಳೆ ಗ್ರಾಮದ ಶ್ರೀ ಬಿಳಿ ಶಿಲೆ ವಿನಾಯಕ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಭಕ್ತಾದಿಗಳಿಗೆ ಆಹ್ವಾನ: ಹೊನ್ನಾವರ ತಾಲೂಕಿನ ಸಮಾಜ ಬಾಂಧವರು ಹಾಗೂ ಸಮಸ್ತ ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ವಿನಾಯಕ, ಶ್ರೀ ರಾಮದೇವರ ಕೃಪೆಗೆ ಪಾತ್ರರಾಗಬೇಕು. ಜೊತೆಗೆ ಪೂಜ್ಯ ಶ್ರೀಗಳಿಂದ ಮಂತ್ರಾಕ್ಷತೆ ಅನುಗ್ರಹ ಪಡೆದು ಪುನೀತರಾಗಬೇಕಾಗಿ ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಹೊನ್ನಾವರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.
About The Author


More Stories
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ
ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಡಿಜಿಟಲ್ ಸ್ಮಾರ್ಟ್ ಬೋರ್ಡ್, ಸೌರವಿದ್ಯುತ್ ಲೋಕಾರ್ಪಣೆ ಹಾಗೂ ಟ್ಯಾಬ್ ವಿತರಣೆ