ಹೊನ್ನಾವರ: ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ONGC ಯ CSR ಯೋಜನೆಯಡಿ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ಹೈಬ್ರಿಡ್ 5 KV ಸೌರವಿದ್ಯುತ್ ವ್ಯವಸ್ಥೆಯ ಲೋಕಾರ್ಪಣೆ ಮತ್ತು ಟ್ಯಾಬ್ ವಿತರಣಾ ಕಾರ್ಯಕ್ರಮವನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.
“ಸ್ವಾತಂತ್ರ್ಯ ಪೂರ್ವದಲ್ಲಿಯೇ ಶಿಕ್ಷಣ ಕ್ರಾಂತಿ ನಡೆಸಿರುವ ಕರ್ಕಿ ಶಾಲೆ ಜಗತ್ಪ್ರಸಿದ್ಧವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ‘ಡಿಜಿಟಲ್ ಇಂಡಿಯಾ’ ಕಲ್ಪನೆಗೆ ಸಿದ್ಧಗೊಂಡು ಕೌಶಲ್ಯಯುತ ಶಿಕ್ಷಣ ಪಡೆಯಬೇಕು” ಎಂದು ವಿದ್ಯಾರ್ಥಿಗಳಿಗೆ ಕಾಗೇರಿ ಕರೆ ನೀಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಯ ಮುಂಚೂಣಿ ಸ್ಥಾನವನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮಟಾ-ಹೊನ್ನಾವರ ಶಾಸಕ ದಿನಕರ ಕೆ. ಶೆಟ್ಟಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದ ಸಂಸದರಿಗೆ ಧನ್ಯವಾದ ಸಲ್ಲಿಸಿ, ಪ್ರಚಾರ ಬಯಸದೆ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.

ಶ್ರೀ ಚೆನ್ನಕೇಶವ ಪ್ರೌಢಶಾಲೆಗೆ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ಸೌರವಿದ್ಯುತ್ ವ್ಯವಸ್ಥೆ ಹಸ್ತಾಂತರಿಸಲಾಯಿತು. ಜೊತೆಗೆ ಗೇರಸೊಪ್ಪ, ಹಡಿನಬಾಳ, ಹೊದಿಕೆ ಶಿರೂರು, ಇಡಗುಂಜಿ ಮತ್ತು ಕಡತೋಕದ ಸರಕಾರಿ ಪ್ರೌಢಶಾಲೆಗಳ ಆಯ್ದ ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ವಿತರಿಸಲಾಯಿತು.

ಡಿಡಿಪಿಐ ಲತಾ ನಾಯಕ, ಡಯಟ್ ಪ್ರಾಚಾರ್ಯ ಎನ್.ಆರ್. ಹೆಗಡೆ, ಬಿಇಒ ಬಿ.ಎಸ್. ಭಜಂತ್ರಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗಜಾನನ ಹೆಗಡೆ, ಉಪಾಧ್ಯಕ್ಷ ಎಂ.ಕೆ. ಭಟ್ಟ ಸೂರಿ, ನಿರ್ದೇಶಕರಾದ ಎನ್.ಎಸ್. ಹೆಗಡೆ, ಕೃಷ್ಣಮೂರ್ತಿ ಹೆಬ್ಬಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕ ಎಲ್.ಎಂ. ಹೆಗಡೆ ಸ್ವಾಗತಿಸಿದರು. ಶ್ರೀಕಾಂತ ಹಿಟ್ನಳ್ಳಿ ವಂದಿಸಿ, ಮುಕ್ತಾ ನಾಯ್ಕ ಹಾಗೂ ಸೀಮಾ ಭಟ್ಟ ಕಾರ್ಯಕ್ರಮ ನಿರೂಪಿಸಿದರು.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ