ಭಟ್ಕಳ: ನಗರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ಕಟ್ಟಡ ಸಮಿತಿಯ ಅಧ್ಯಕ್ಷ ಡಾ. ರವಿ ನಾಯ್ಕ್ ಅವರ ನೇತೃತ್ವದಲ್ಲಿ ಭೇಟಿಯಾಗಿ, ಶಾಲೆಯ ಕುರಿತು ವಿವರಣೆ ನೀಡಲಾಯಿತು.
ಸಂಸದರ ಭರವಸೆ: ಶಾಲೆಯ ಪರಿಸ್ಥಿತಿ ಹಾಗೂ ಅಗತ್ಯತೆಗಳ ಬಗ್ಗೆ ಮಾಹಿತಿ ಪಡೆದ ಸಂಸದರು, ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಶಾಲಾ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಸ್ತೃತ ಮನವಿ ಪತ್ರವನ್ನು ಸಲ್ಲಿಸುವಂತೆ ಸೂಚಿಸಿದರು.
ಧನ್ಯವಾದ ಸಮರ್ಪಣೆ: ಶಾಲೆಯ ಶ್ರೇಯೋಭಿವೃದ್ಧಿಗೆ ಬೆಂಬಲ ಸೂಚಿಸಿದ ಸಂಸದರಿಗೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.
ಈ ಭೇಟಿಯ ಸಂದರ್ಭದಲ್ಲಿ ಶಾಲಾ ಕಟ್ಟಡ ಸಮಿತಿಯ ಕಾರ್ಯದರ್ಶಿ ಕಿರಣ್ ಶಾನಭಾಗ ಹಾಗೂ ಖಜಾಂಚಿ ಕಿರಣ್ ಚಂದಾವರ್ ಉಪಸ್ಥಿತರಿದ್ದರು.

About The Author


More Stories
ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ್ ಕಚೇರಿಗೆ ಮನವಿ
ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬಿಸಿ ಮುಟ್ಟಿಸಿದ ಎಎಸ್ಪಿ ರಾನು ಗುಪ್ತ: 6 ಟಿಪ್ಪರ್ಗಳು, 6 ಮಂದಿ ವಶಕ್ಕೆ
ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯರಿಗೆ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಸನ್ಮಾನ