ಭಟ್ಕಳ: ಕರ್ನಾಟಕ ಸರ್ಕಾರದ ಆದೇಶದಂತೆ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ರಾನು ಗುಪ್ತ ಅವರು ಭಟ್ಕಳ ಉಪವಿಭಾಗದ ನೂತನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬಿಹಾರ ಮೂಲದ ರಾನು ಗುಪ್ತ ಅವರು ಕರ್ನಾಟಕ ಕೇಡರ್‌ನ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಇದಕ್ಕೂ ಮೊದಲು ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಪ್ರೊಬೇಷನರಿ ತರಬೇತಿ (DPT) ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಹಿಂದೆ ಭಟ್ಕಳ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್ ಅವರನ್ನು ಬೆಂಗಳೂರಿನ ಡಿಜಿ ಕಚೇರಿಗೆ ರಿಪೋರ್ಟ್ ಮಾಡಿಕೊಳ್ಳಲು ಸೂಚಿಸಲಾಗಿದೆ.
ಭಟ್ಕಳ ಉಪವಿಭಾಗದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ ಹಾಗೂ ಸಿಬ್ಬಂದಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವ ಜವಾಬ್ದಾರಿ ನೂತನ ಎಎಸ್‌ಪಿ ಅವರ ಮೇಲಿದೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ