ಭಟ್ಕಳ: ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಕಾಳ ಎಸ್. ವೈದ್ಯ ಅವರನ್ನು ಕೆಡಿಸಿಸಿ ಬ್ಯಾಂಕ್ನ ಭಟ್ಕಳ ತಾಲೂಕು ನೌಕರರು ಹಾಗೂ ಸಿಬ್ಬಂದಿ ಮಂಗಳವಾರ ಭಟ್ಕಳ ಶಾಖೆಯಲ್ಲಿ ಸನ್ಮಾನಿಸಿದರು.
ಮಂಕಾಳ ವೈದ್ಯರಿಗೆ ಉಪಸಭಾಧ್ಯಕ್ಷರಂತಹ ಮಹತ್ವದ ಜವಾಬ್ದಾರಿ ದೊರೆತಿರುವುದು ಕ್ಷೇತ್ರ ಮಾತ್ರವಲ್ಲದೆ, ಸಹಕಾರಿ ಕ್ಷೇತ್ರಕ್ಕೂ ಹೆಮ್ಮೆಯ ವಿಷಯವಾಗಿದೆ ಎಂದು ಬ್ಯಾಂಕ್ ನೌಕರರು ಅಭಿಪ್ರಾಯಪಟ್ಟರು.
ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ಕೆ. ವಿಶಾಲ್ ಮಾತನಾಡಿ, ಶಾಸಕರಾಗಿ, ಸಚಿವರಾಗಿ ಹಾಗೂ ಇದೀಗ ಉಪಸಭಾಧ್ಯಕ್ಷರಾಗಿ ವಿವಿಧ ಜವಾಬ್ದಾರಿ ವಹಿಸಿಕೊಂಡಿರುವ ಮಂಕಾಳ ವೈದ್ಯರ ಅನುಭವ ಮತ್ತು ಸರಳ ವ್ಯಕ್ತಿತ್ವವು ಈ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸಲು ನೆರವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ವಿವಿಧ ಶಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದು, ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.

ಆರ್.ವಿ. ನಾಯ್ಕ್ ಸ್ವಾಗತಿಸಿದರು ಹಾಗೂ ಕೆ.ಜಿ. ಪೈ ಕಾರ್ಯಕ್ರಮ ನಿರೂಪಿಸಿದರು.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ