ಶಿರಸಿ: ಸರ್ವೇ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವಾ ನಿವೃತ್ತಿ ಹೊಂದಿದ್ದ ನಗರದ ಅಶ್ವಿನಿ ಸರ್ಕಲ್ ನಿವಾಸಿ ರಾಮಚಂದ್ರ ನಾರಾಯಣ ಶೆಟ್ಟಿ (80) ಅವರು ಅನಾರೋಗ್ಯದಿಂದ ನಿಧನರಾದರು.
ಮೂಲತಃ ಹೊನ್ನಾವರ ತಾಲೂಕಿನ ಕರ್ಕಿಯವರಾದ ರಾಮಚಂದ್ರ ಶೆಟ್ಟಿಯವರು ಸರ್ವೇ ಇಲಾಖೆಯಲ್ಲಿ 35 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಶಿರಸಿ, ಕಾರವಾರ, ಕುಮಟಾ, ಕುಂದಾಪುರ, ಮುಲ್ಕಿ, ಬಳ್ಳಾರಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಸಹಾಯಕ ನಿರ್ದೇಶಕರಾಗಿ ನಿವೃತ್ತರಾಗಿದ್ದರು.
ಸಾತ್ವಿಕ ಸ್ವಭಾವದ ಇವರು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಭಕ್ತಿ ಹೊಂದಿದ್ದರು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದರು. ಮೃತರು ಪತ್ನಿ, ಹಿರಿಯ ಪತ್ರಕರ್ತ ಪ್ರದೀಪ ಶೆಟ್ಟಿ ಸೇರಿದಂತೆ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸೆಪ್ಟೆಂಬರ್ 3ರ ಬೆಳಿಗ್ಗೆ 8.30ಕ್ಕೆ ಶಿರಸಿ ನಗರದ ನೆಮ್ಮದಿ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಡಿಜಿಟಲ್ ಸ್ಮಾರ್ಟ್ ಬೋರ್ಡ್, ಸೌರವಿದ್ಯುತ್ ಲೋಕಾರ್ಪಣೆ ಹಾಗೂ ಟ್ಯಾಬ್ ವಿತರಣೆ