ಗೋಕರ್ಣ: ನೀರು ಎಂಬುದು ಸಕಲ ಪ್ರಾಣಿಗಳ ಪ್ರಾಣವಾಗಿದ್ದು, ಸಂಸ್ಕೃತದಲ್ಲಿ ನೀರಿಗೆ ‘ಜೀವನ’ ಎಂಬ ಪರ್ಯಾಯ ಪದವಿದೆ. ದೇವರು ಕೊಟ್ಟಂತಹ ಅತ್ಯದ್ಭುತ ಜಲವನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ ವಿಷವಾಗಿಸಿ ಕುಡಿಯಬಾರದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಸೆಪ್ಟೆಂಬರ್ 6, 2026 ರಂದು ಶ್ರೀಗಳು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ನೀಡಿದರು.
ಆಹಾರ ಹಾಗೂ ಜಲ ಜಾಗೃತಿ: ಪ್ಲಾಸ್ಟಿಕ್ ಬಾಟಲಿಯ ನೀರು ಕುಡಿದಾಗ ನೀರಿನೊಂದಿಗೆ ಪ್ಲಾಸ್ಟಿಕ್ ಅಂಶವೂ ದೇಹ ಸೇರಿ ಕೆಡುಕುಂಟಾಗುತ್ತದೆ ಎಂಬುದನ್ನು ಆಧುನಿಕ ವಿಜ್ಞಾನವೂ ಒಪ್ಪಿದೆ. ಭಾರತೀಯ ಪರಂಪರೆಯಲ್ಲಿ ವ್ಯಕ್ತಿಯ ಗುಣ ಹಾಗೂ ಕೈಗೊಳ್ಳುವ ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆಯನ್ನು ಸೂಚಿಸಲಾಗಿದೆ.
ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ: ಶ್ರೀಮಠಕ್ಕೆ ಪಾರಂಪರಿಕವಾಗಿ ನಡೆದುಕೊಳ್ಳುವ ಗಾಣಿಗ ಸಮಾಜದ ವತಿಯಿಂದ ಶ್ರೀಗಳಿಗೆ ಸ್ವರ್ಣಪಾದುಕಾ ಪೂಜೆ ನೆರವೇರಿತು. ಗಾಣಿಗ ಸಮಾಜದೊಂದಿಗೆ ಶ್ರೀಮಠದ ಬಾಂಧವ್ಯ ನಿರಂತರವಾಗಿರಲಿ ಎಂದು ಶ್ರೀಗಳು ಹಾರೈಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಬೆಂಗಳೂರು ಹವ್ಯಕ ಮಂಡಲದ ವಲಯಗಳಿಂದ ದತ್ತಾತ್ರೇಯ ಭಟ್ ಕುಟುಂಬಸ್ಥರು ಗುರುಭಿಕ್ಷಾಸೇವೆ ಸಮರ್ಪಿಸಿದರು. ದಿನಪ್ರಧಾನರಾದ ಸಿಎ. ಸಿಎಸ್. ಗೋಪಾಲಕೃಷ್ಣ ಹೆಗಡೆ ಹುಕ್ಲುಮಕ್ಕಿ ದಂಪತಿ, ಕೊಣಂದೂರು ಪ್ರಕಾಶ, ಡಾ. ವೈ. ವಿ. ಕೃಷ್ಣಮೂರ್ತಿ, ಗುರುರಾಜ ಪಡೀಲು ಹಾಗೂ ಗಾಣಿಗ ಸಮಾಜದ ಪ್ರಮುಖರಾದ ಮಹೇಶ ಶೆಟ್ಟಿ, ದಾಮೋಧರ ಶೆಟ್ಟಿ, ಸುಭಾಸ್ ಶೆಟ್ಟಿ ಭಟ್ಕಳ, ನಾರಾಯಣ ಶೆಟ್ಟಿ, ಮನೋಜ ಶೆಟ್ಟಿ ಉಪಸ್ಥಿತರಿದ್ದರು.
About The Author


More Stories
ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ಗೋಕರ್ಣದಲ್ಲಿ ರಾಘವೇಶ್ವರ ಶ್ರೀ ಪ್ರತಿಪಾದನೆ
ಮಳೆನೀರು ಅಮೃತವಿದ್ದಂತೆ, ಚರಂಡಿ ಪಾಲು ಮಾಡದಿರಿ: ಗೋಕರ್ಣದಲ್ಲಿ ರಾಘವೇಶ್ವರ ಶ್ರೀ ಪ್ರತಿಪಾದನೆ
ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ: ಗೋಕರ್ಣದಲ್ಲಿ ರಾಘವೇಶ್ವರ ಶ್ರೀ ಪ್ರತಿಪಾದನೆ