October 22, 2026

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಹಡಿನಬಾಳ ಶಾಲೆಯ ದೀಕ್ಷಾ ನಾಯ್ಕ್ ರಾಜ್ಯ ಮಟ್ಟಕ್ಕೆ ಆಯ್ಕೆ

ಹಡಿನಬಾಳ / ಹೊನ್ನಾವರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರವಾರ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯಲ್ಲಿ ಹಡಿನಬಾಳ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಮಂಜುನಾಥ ನಾಯ್ಕ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಸಾಧನೆಯ ಹಾದಿ: ಈ ಹಿಂದೆ ಕೂಡ ದೀಕ್ಷಾ ಹಲವು ಪ್ರಬಂಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದ ಬಹುಮಾನಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ.

    ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

    About The Author

    error: Content is protected !!