October 22, 2026

ಭಟ್ಕಳದಲ್ಲಿ ಕ.ವಿ.ವಿ. ಅಂತರ್ ಮಹಾವಿದ್ಯಾಲಯಗಳ ಚೆಸ್ ಪಂದ್ಯಾವಳಿ ಹಾಗೂ ತಂಡದ ಆಯ್ಕೆ ಪ್ರಕ್ರಿಯೆ

ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕ.ವಿ.ವಿ. ಅಂತರ್ ಮಹಾವಿದ್ಯಾಲಯಗಳ ಪುರುಷ ಮತ್ತು ಮಹಿಳೆಯರ ಏಕ ವಲಯ ಮಟ್ಟದ ಚೆಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.

ಈ ಕ್ರೀಡಾಕೂಟವು ಅಕ್ಟೋಬರ್ 6 ಮತ್ತು 7ರಂದು ಎರಡು ದಿನಗಳ ಕಾಲ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜು ಆವರಣದಲ್ಲಿ ಜರುಗಲಿದೆ.

ಪಂದ್ಯಾವಳಿಯ ವಿವರಗಳು: ಕರ್ನಾಟಕ ವಿಶ್ವವಿದ್ಯಾಲಯದ ಸಂಯೋಜನೆಗೆ ಒಳಪಟ್ಟ ವಿವಿಧ ಕಾಲೇಜುಗಳ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ಮತ್ತು ಆಸಕ್ತ ಕಾಲೇಜು ಕ್ರೀಡಾಪಟುಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಂಸ್ಥೆಯ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

      About The Author

      error: Content is protected !!