ಹೊನ್ನಾವರ: ಕಳೆದ ಮೂರು ವರ್ಷಗಳಿಂದ ಖಾಲಿಯಿದ್ದ ಹೊನ್ನಾವರ ತಾಲೂಕು ಆಸ್ಪತ್ರೆಯ ಜನರಲ್ ಸರ್ಜನ್ (ಸಾಮಾನ್ಯ ಶಸ್ತ್ರಚಿಕಿತ್ಸಕ) ಹುದ್ದೆಗೆ ಡಾ. ರಾಘವೇಂದ್ರ ಕೆ. ಅವರು ನೇಮಕಗೊಂಡಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರದವರಾದ ಡಾ. ರಾಘವೇಂದ್ರ ಕೆ. ಅವರು ಸರ್ಜರಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (Post Graduation) ಪಡೆದಿದ್ದು, ಎಂಡೋಸ್ಕೋಪಿಕ್ ಹಾಗೂ ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿದ್ದಾರೆ.
ಕಳೆದ ಐದು ವರ್ಷಗಳಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಇದೀಗ ವರ್ಗಾವಣೆಗೊಂಡು ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದಾರೆ. ಸಾರ್ವಜನಿಕರು ಈ ಸೇವೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ಶ್ರೇಷ್ಠಿ ಅವರು ತಿಳಿಸಿದ್ದಾರೆ.
About The Author


More Stories
ಉಪ್ಪೋಣಿ ಶ್ರೀ ನಾಗಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅ.11ರಿಂದ ನವರಾತ್ರಿ ಉತ್ಸವ
ಹಡಿನಬಾಳ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ: ಸ್ವಚ್ಛತಾ ಕಾರ್ಯಕ್ರಮ ಹಾಗೂ ಸನ್ಮಾನ
‘ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು’: ರಾಜ್ಯ ಪ್ರಶಸ್ತಿ ಪುರಸ್ಕೃತೆ ಮಮತಾ ನಾಯ್ಕ್ಗೆ ಸನ್ಮಾನ