ಭಟ್ಕಳ: ಭಟ್ಕಳದಲ್ಲಿ ನಡೆದ 14ರಿಂದ 17 ವರ್ಷದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಭಟ್ಕಳದ ದಿ ನ್ಯೂ ಇಂಗ್ಲಿಷ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
400 ಮೀ. ಓಟದಲ್ಲಿ ಆಶಾ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕರಾಟೆ ವಿಭಾಗದಲ್ಲಿ ದಿಯಾ ಚಂದ್ರು ನಾಯ್ಕ ಪ್ರಥಮ ಸ್ಥಾನ ಹಾಗೂ ಟ್ರಿಪಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಕರಾಟೆ ವಿಭಾಗದಲ್ಲಿ ಗಿರಿಧರ ನಾಯ್ಕ ಪ್ರಥಮ ಸ್ಥಾನ ಪಡೆದರೆ, 3000 ಮೀ. ಓಟದಲ್ಲಿ ನಿಶಾನ್ ಲಕ್ಷ್ಮಣ ನಾಯ್ಕ ದ್ವಿತೀಯ ಸ್ಥಾನ ಪಡೆದಿದ್ದಾರೆ. 400 ಮೀ. ಓಟದಲ್ಲಿ ಶ್ರವಂತಿ ಬಿ. ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ಎಲ್ಲ ವಿದ್ಯಾರ್ಥಿಗಳನ್ನು ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಶ್ರೀ ಸುರೇಂದ್ರ ಶಾನಭಾಗ, ಮುಖ್ಯಾಧ್ಯಾಪಕರಾದ ಶರದ ಗುನಗಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಕೃಷ್ಣಪ್ಪ ನಾಯ್ಕ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು