ಎಂ.ಕೆ.ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿ ತಾಲೂಕಿನ ನೇಗಿನಹಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳ ಬಿಸಿಯೂಟ ಸಾಗಾಟ ಮಾಡುವ ವಾಹನದ ಚಾಲಕನು ಮದ್ಯಪಾನ ಸೇವಿಸಿ, ರಸ್ತೆಯ ಮಧ್ಯದಲ್ಲಿ ಬೇಕಾಬಿಟ್ಟಿಯಾಗಿ ವಾಹನ ಪಾರ್ಕಿಂಗ್ ಮಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಜಯ ಕರ್ನಾಟಕ ಸಂಘಟನೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ್ ರಜಪೂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲೇ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.
ಸಂಘಟನೆಯ ಪ್ರಮುಖ ಆಗ್ರಹಗಳು:
ಚಾಲಕನ ಅಮಾನತಿಗೆ ಒತ್ತಾಯ: ಶಾಲಾ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ವಿಷಯದಲ್ಲಿ ಇಂತಹ ಬೇಜವಾಬ್ದಾರಿಯನ್ನು ಸಹಿಸಲು ಸಾಧ್ಯವಿಲ್ಲ. ಕುಡಿದು ವಾಹನ ಚಲಾಯಿಸಿದ ಚಾಲಕನನ್ನು ಕೂಡಲೇ ಅಮಾನತುಗೊಳಿಸಬೇಕು.

ಕಠಿಣ ಕ್ರಮ: ಬಿಸಿಯೂಟ ಪೂರೈಕೆಯ ಗುತ್ತಿಗೆದಾರರ ವಿರುದ್ಧವೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಉಗ್ರ ಹೋರಾಟ ರೂಪಿಸುವುದಾಗಿ ಸಂಜಯ್ ರಜಪೂತ್ ಎಚ್ಚರಿಸಿದ್ದಾರೆ. ವರದಿ : ಮಹೇಶ ಶರ್ಮ
About The Author


More Stories