ಭಟ್ಕಳ: ಗಾಂಧಿ ಜಯಂತಿಯ ಅಂಗವಾಗಿ ನಗರದ ಬಂದರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು.
ಹಿಂದೂ ರುದ್ರಭೂಮಿ ಸಮಿತಿ ಭಟ್ಕಳದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಈ ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಗಿಡಗಂಟಿಗಳ ತೆರವು: ಶವಸಂಸ್ಕಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ದಟ್ಟವಾಗಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಆವರಣದಲ್ಲಿದ್ದ ಕಸ ಮತ್ತು ತ್ಯಾಜ್ಯವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು.
ಈ ವೇಳೆ ಮಾತನಾಡಿದ ಹಿಂದೂ ರುದ್ರಭೂಮಿ ಸಮಿತಿ ಅಧ್ಯಕ್ಷ ಎಂ.ಆರ್. ನಾಯ್ಕ, ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿದೆ. ಸ್ವಚ್ಛ ಭಾರತ ಅಭಿಯಾನವು ಕೇವಲ ಫೋಟೋ ತೆಗೆಸಿಕೊಳ್ಳುವುದಕ್ಕೆ ಸೀಮಿತವಾಗದೆ, ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕ್ರಿಯಾಶೀಲ ಗೆಳೆಯರ ಬಳಗದ ಅಧ್ಯಕ್ಷ ರಮೇಶ ಖಾರ್ವಿ, ಪಾಂಡುರಂಗ ನಾಯ್ಕ ಆಸರಕೇರಿ, ಪಾಂಡುರಂಗ ನಾಯ್ಕ ಕೋಗ್ತಿ, ಉದ್ಯಮಿ ಕಿರಣ್ ಮಾನಕಾಮೆ, ಜಯರಾಮ ಶಾನಭಾಗ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
About The Author


More Stories
ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮನಸೂರೆಗೊಂಡ ಭಕ್ತಿಸಂಗೀತ
ಭಟ್ಕಳ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಹಾಗೂ ದೀಪದಾನ ಕಾರ್ಯಕ್ರಮ
ಭಟ್ಕಳದ ದೈಹಿಕ ಶಿಕ್ಷಣ ಶಿಕ್ಷಕ ಧರ್ಮ ನಾಯ್ಕ ಅವರಿಗೆ ‘ಕಾಯಕ ರತ್ನ’ ರಾಜ್ಯ ಪ್ರಶಸ್ತಿ ಗೌರವ