October 22, 2026

ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮ

ಸೋಮವಾರಪೇಟೆ: ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ನೂತನ ಸದಸ್ಯರ ಸೇರ್ಪಡೆ ಮತ್ತು ಪದಗ್ರಹಣ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮವನ್ನು ಕರವೇ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಂಚಾಲಕರಾದ ಶ್ರೀಮತಿ ದೀಪಾ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ: ಕೊಡ್ಲಿಪೇಟೆ ಹೋಬಳಿ ಕರವೇ ನೂತನ ಅಧ್ಯಕ್ಷರಾಗಿ ಶ್ರೀ ಶೋಭಿತ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘಟನೆಗಾಗಿ ಶ್ರಮಿಸಿದ ಶ್ರೀಮತಿ ಸುಪ್ರಿತಾ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ದೀಪಾ ಪೂಜಾರಿ (ರಾಜ್ಯ ಸಂಚಾಲಕರು): “ಕೊಡ್ಲಿಪೇಟೆಯಲ್ಲಿ ಹೋಬಳಿ ಘಟಕ ಅಸ್ತಿತ್ವಕ್ಕೆ ಬಂದಿರುವುದು ಸಂತಸ ತಂದಿದೆ. ನಾರಾಯಣ ಗೌಡರ ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಘೋಷಣೆಗೆ ಬದ್ಧರಾಗಿ, ಸ್ಥಳೀಯ ಸಮಸ್ಯೆಗಳ ವಿರುದ್ಧ ಹೋರಾಡಿ ಜನರಿಗೆ ಶಾಂತಿ ಮತ್ತು ನೆಮ್ಮದಿಯ ಬದುಕು ಕಟ್ಟಿಕೊಡಬೇಕು” ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ಗೋವಿಂದರಾಜ ದಾಸ್ (ಜಿಲ್ಲಾ ಪ್ರಧಾನ ಕಾರ್ಯದರ್ಶಿ): ಕರವೇ ಕಾರ್ಯಕರ್ತರು ಸಂಘಟನೆಯ ಶಿಸ್ತು ಮತ್ತು ನಿಯಮಾವಳಿಗಳನ್ನು ಪಾಲಿಸಬೇಕು. ನಾಡು-ನುಡಿ, ಜಲ ರಕ್ಷಣೆ ಹಾಗೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೋರಾಟಕ್ಕೆ ಸದಾ ಸಿದ್ಧರಿರಬೇಕು ಎಂದು ಸಲಹೆ ನೀಡಿದರು.

    60ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ: ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಹೊಸ ಕಾರ್ಯಕರ್ತರು ಕನ್ನಡ ಶಾಲು ಧರಿಸುವ ಮೂಲಕ ಅಧಿಕೃತವಾಗಿ ಕರವೇ ಸಂಘಟನೆಗೆ ಸೇರ್ಪಡೆಯಾದರು. ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುಡುಪಜೆ, ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

    ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಂತೋಷ್, ಕುಶಾಲನಗರ ತಾಲೂಕು ಉಪಾಧ್ಯಕ್ಷ ಪಯಾಜ್‌‌ಉದ್ದಿನ್, ಪ್ರಧಾನ ಕಾರ್ಯದರ್ಶಿ ಕುಮಾರ್ ದೇವಾಂಗ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸ್ಥಳೀಯ ಕರವೇ ಮುಖಂಡರು ಉಪಸ್ಥಿತರಿದ್ದರು. ಸಂಘಟಕ ಅವಿನಾಶ್ ವಂದನಾರ್ಪಣೆ ನೆರವೇರಿಸಿದರು.

    About The Author

    error: Content is protected !!