October 22, 2026

ಕೊಡಗಿನ ಪ್ರಸಿದ್ಧ ಗೋಣಿಕೊಪ್ಪ ದಸರಾ ಉತ್ಸವ: 48ನೇ ಸಾಲಿನ ಲಾಂಛನ ಬಿಡುಗಡೆಗೊಳಿಸಿದ ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗಿನ ಪ್ರಸಿದ್ಧ ಗೋಣಿಕೊಪ್ಪ ದಸರಾ ಉತ್ಸವದ 48ನೇ ಸಾಲಿನ ಅಧಿಕೃತ ಲಾಂಛನ ಬಿಡುಗಡೆ ಕಾರ್ಯಕ್ರಮವನ್ನು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನೆರವೇರಿಸಿದರು.

ಸ್ಥಳೀಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಸರಾ ಉತ್ಸವದ ಲಾಂಛನವನ್ನು ಅನಾವರಣಗೊಳಿಸಿ ಮಾತನಾಡಿದ ಶಾಸಕರು, ನಾಡಹಬ್ಬ ದಸರಾ ಉತ್ಸವವು ಪ್ರತಿಯೊಬ್ಬರಿಗೂ ಒಳಿತನ್ನು ತರಲಿ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಸ್ತ ಜನತೆಗೆ ಶುಭವಾಗಲಿ ಎಂದು ಶುಭ ಹಾರೈಸಿದರು.

(ವರದಿ: ಪ್ರಿತುನ್ ಪೂವಣ್ಣ)

About The Author

error: Content is protected !!