

ಭಟ್ಕಳ: ತಾಲೂಕಿನ ಹೆಬಳಿ ಗ್ರಾಮದ ಪಿರ್ಧೋಸನಗರದ ಕೋಳಿ ಫಾರ್ಮ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು, ಆತನ ವಿರುದ್ಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಸಾನಗರ ಬೆಂಡೇಖಾನ ನಿವಾಸಿ ಮೊಹಮ್ಮದ್ ಸಾಯಿಮ್ (31) ಪ್ರಕರಣದ ಆರೋಪಿಯಾಗಿದ್ದಾನೆ.
ವಶಪಡಿಸಿಕೊಂಡ ಸೊತ್ತು: ಆರೋಪಿಯು ತನ್ನ ಮಾರುತಿ ಸುಜುಕಿ ಬರ್ಗ್‌ಮನ್ ಸ್ಕೂಟರ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 816 ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹81,500) ಹಾಗೂ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ದಾಖಲು: ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ ನೀಡಿದ ದೂರಿನನ್ವಯ ಪಿಎಸ್‌ಐ ಭರಮಪ್ಪ ಬೆಳಗಲಿ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹಾಗೂ ಎಎಸ್‌ಪಿ ರಾಣು ಗುಪ್ತಾ ಅವರ ಮಾರ್ಗದರ್ಶನದಲ್ಲಿ ನಡೆಡ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜು ಗೊಂಡ, ಈರಣ್ಣ ಪೂಜೇರಿ, ಬಾಗಪ್ಪ ಕಡಕಲ್, ನಿಂಗನಗೌಡ ಪಾಟೀಲ, ಮಂಜುನಾಥ ಖಾರ್ವಿ, ಅಂಬರೀಷ್ ಕುಂಬಾರಿ, ವಿನಯ ಮಬ್ರುಮಕರ್ ಹಾಗೂ ಚಾಲಕ ಸಂತೋಷ ಹಡಪದ ಭಾಗವಹಿಸಿದ್ದರು.
About The Author


More Stories
ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮನಸೂರೆಗೊಂಡ ಭಕ್ತಿಸಂಗೀತ
ಭಟ್ಕಳ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಹಾಗೂ ದೀಪದಾನ ಕಾರ್ಯಕ್ರಮ
ಭಟ್ಕಳದ ದೈಹಿಕ ಶಿಕ್ಷಣ ಶಿಕ್ಷಕ ಧರ್ಮ ನಾಯ್ಕ ಅವರಿಗೆ ‘ಕಾಯಕ ರತ್ನ’ ರಾಜ್ಯ ಪ್ರಶಸ್ತಿ ಗೌರವ