October 21, 2026

ನಾಡು-ನುಡಿಯ ಸೇವೆಗೆ ಕರವೇ ಸ್ವಾಭಿಮಾನಿ ಸೇನೆ ಸನ್ನದ್ಧ: ಕುಶಾಲನಗರ ನಗರ ಘಟಕಕ್ಕೆ ನೂತನ ಸಾರಥಿಗಳ ನೇಮಕ

ಕುಶಾಲನಗರ: ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ತಾಲ್ಲೂಕು ಘಟಕದ ಅಧ್ಯಕ್ಷ ಶಿವು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಶಾಲನಗರ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಕರವೇ ಸ್ವಾಭಿಮಾನಿ ಸೇನೆಯ ನಗರ ಘಟಕದ ನೂತನ ಅಧ್ಯಕ್ಷರಾಗಿ ಪರಮೇಶ್ (ಮಂಡ್ಯ) ಹಾಗೂ ಗೌರವಾಧ್ಯಕ್ಷರಾಗಿ ವಿಲ್ಸನ್ ಅವರು ಜವಾಬ್ದಾರಿ ವಹಿಸಿಕೊಂಡರು. ಇದೇ ವೇಳೆ ಪರಮೇಶ್ ಹಾಗೂ ವಸಂತ್ ಅವರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಕುಶಾಲನಗರ ತಾಲ್ಲೂಕು ಅಧ್ಯಕ್ಷ ಶಿವು ಮಾತನಾಡಿ, “ನಾಡು, ನುಡಿ ಹಾಗೂ ಸಮಾಜ ಸೇವೆಗಾಗಿ ಸಂಘಟನೆಗೆ ಬರುವ ಪ್ರತಿಯೊಬ್ಬರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ” ಎಂದು ತಿಳಿಸಿ, ಸ್ವಯಂಪ್ರೇರಿತರಾಗಿ ಸಂಘಟನೆಗೆ ಸೇರ್ಪಡೆಯಾದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಶಿವಣ್ಣ, ಜಿಲ್ಲಾ ಖಜಾಂಚಿ ಅಂತೋನಿ, ಜಿಲ್ಲಾ ಕಾರ್ಯದರ್ಶಿ ಮಣಿಕಂಠ, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಚಂದ್ರು, ತಾಲ್ಲೂಕು ಸಂಚಾಲಕ ವಿ.ಪಿ. ಚಂದ್ರಶೇಖರ್, ಜಿಲ್ಲಾ ಸಂಚಾಲಕ ಅಭಯ್ ಸಿಂಗ್ ಹಾಗೂ ಕುಶಾಲನಗರ ಮಹಿಳಾ ಘಟಕದ ತಾಲ್ಲೂಕು ಉಪಾಧ್ಯಕ್ಷೆ ದಿವ್ಯ ಡಿಸೋಜ ಸೇರಿದಂತೆ ಸಂಘಟನೆಯ ಹಲವು ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.                                        (ವರದಿ: ಪ್ರಿತುನ್ ಪೂವಣ್ಣ)

About The Author

error: Content is protected !!