ಸೋಮವಾರಪೇಟೆ: ಸಹಕಾರ ಕ್ಷೇತ್ರದ ಬೆಳೆವಣಿಗೆಯಿಂದ ಮಾತ್ರ ಕೃಷಿ ಕ್ಷೇತ್ರದ ನೈಜ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ತಿಳಿಸಿದರು.
ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ನ ಒಟ್ಟು ₹26 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಕಚೇರಿ ಕಟ್ಟಡವನ್ನು ಶಾಸಕರು ಉದ್ಘಾಟಿಸಿ ಮಾತನಾಡಿದರು.
ಸಹಕಾರ ಸಂಸ್ಥೆಗಳು ಗ್ರಾಮೀಣ ಭಾಗದ ರೈತರ ಜೀವನಾಡಿಯಾಗಿದ್ದು, ಬ್ಯಾಂಕ್ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಒದಗಿಸಲಾಗುತ್ತಿರುವ ವಿವಿಧ ಸೌಲಭ್ಯಗಳು ಹಾಗೂ ಸಾಲ ಸೌಲಭ್ಯಗಳನ್ನು ಪ್ರತಿಯೊಬ್ಬ ರೈತರು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು. ಸುಸಜ್ಜಿತ ನೂತನ ಕಟ್ಟಡದ ಮೂಲಕ ಸಂಸ್ಥೆಯು ಸದಸ್ಯರಿಗೆ ಇನ್ನಷ್ಟು ಆಧುನಿಕ ಹಾಗೂ ವೇಗದ ಸೇವೆಗಳನ್ನು ತಲುಪಿಸಲಿ ಎಂದು ಅವರು ಶುಭ ಹಾರೈಸಿದರು.
ಬ್ಯಾಂಕ್ ಕಟ್ಟಡದ ನವೀಕರಣ ಕಾಮಗಾರಿಗೆ ಸಂಘದ ಆಂತರಿಕ ಅನುದಾನದಿಂದ ₹21 ಲಕ್ಷ ಹಾಗೂ ಶಾಸಕರ ನಿಧಿಯಿಂದ ₹5 ಲಕ್ಷ ಅನುದಾನವನ್ನು ಬಳಸಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಬಿ.ಬಿ. ಸತೀಶ್ ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ನವೀಕೃತ ಕಟ್ಟಡದ ಮೂಲಕ ಉನ್ನತ ಮಟ್ಟದ ಸೇವೆ ನೀಡಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಪ್ರಮುಖ ಸಹಕಾರಿಗಳು ಉಪಸ್ಥಿತರಿದ್ದರು.
ವರದಿ: ಪ್ರಿತುನ್ ಪೂವಣ್ಣ
About The Author


More Stories