October 22, 2026

ಭಟ್ಕಳದಲ್ಲಿ ಎಂಡಿಎಂಎ ಜಾಲಕ್ಕೆ ಪೊಲೀಸರ ಶಾಕ್: ಯುವಕನ ಬಂಧನ, ಬುಲೆಟ್ ಜಪ್ತಿ

ಭಟ್ಕಳ: ನಗರಸಭೆ ಸಮೀಪದ ಕಿದ್ವಾಯಿ ರಸ್ತೆಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಭಟ್ಕಳ ಶಹರ ಠಾಣೆ ಪೊಲೀಸರು ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬಂದರು ರಸ್ತೆ 5ನೇ ಕ್ರಾಸ್ ನಿವಾಸಿ ಮಹ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆಯ ವಿವರ: ಅಕ್ಟೋಬರ್ 8ರಂದು ಮಧ್ಯಾಹ್ನ ಸುಮಾರು 12:45ರ ವೇಳೆಗೆ ಕಿದ್ವಾಯಿ ರಸ್ತೆಯಲ್ಲಿ ಬುಲೆಟ್‌ನಲ್ಲಿ ಎಂಡಿಎಂಎ ಇಟ್ಟುಕೊಂಡು ಮಾರಾಟ ಮಾಡಲು ಸಿದ್ಧತೆಯಲ್ಲಿದ್ದಾಗ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.

ಜಪ್ತಿಯಾದ ಸೊತ್ತುಗಳು:

ಎಂಡಿಎಂಎ: ₹21,800 ಮೌಲ್ಯದ 2.180 ಗ್ರಾಂ ಎಂಡಿಎಂಎ ಮಾದಕ ವಸ್ತು.

ವಾಹನ: ಸಾಗಾಟಕ್ಕೆ ಬಳಸಿದ್ದ ₹1 ಲಕ್ಷ ಮೌಲ್ಯದ ರಾಯಲ್ ಎನ್‌ಫೀಲ್ಡ್ ಬುಲೆಟ್ (KA-47/EB-8107).

ಬಂಧಿತ ಆರೋಪಿಯ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಈ ಜಾಲದ ಹಿಂದೆ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಎಎಸ್‌ಪಿ ರಾಣು ಗುಪ್ತಾ ಅವರ ಮಾರ್ಗದರ್ಶನದಲ್ಲಿ, ಸಿಪಿಐ ದಿವಾಕರ ಪಿ.ಎಂ. ಮತ್ತು ಪಿಎಸ್‌ಐ ನವೀನ್ ಎಸ್. ನಾಯ್ಕ ನೇತೃತ್ವದ ಸಿಬ್ಬಂದಿ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.                                 ವರದಿ: ಭಾವನಾ ಟಿವಿ ಡೆಸ್ಕ್

About The Author

error: Content is protected !!