ಭಟ್ಕಳ: ನಗರದ ಹಳೆ ಬಸ್ ನಿಲ್ದಾಣದ ಸಮೀಪವಿರುವ ಮೀನು ಮಾರುಕಟ್ಟೆಯೊಳಗೆ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಘಟನೆಯಲ್ಲಿ ಭಟ್ಕಳದ ಗಾಂಧಿನಗರ ನಿವಾಸಿ, ಮೀನು ವ್ಯಾಪಾರಿ ಮೊಹಮ್ಮದ್ ಅರ್ಸಲಾನ್ ಹೈದರ್ (36) ಹಾಗೂ ಉಸ್ಮಾನ್ ನಗರ ನಿವಾಸಿ ಶೇಖ್ ಮೊಹಮ್ಮದ್ ಶರೀಫ್ (25) ಎಂಬುವರು ಪರಸ್ಪರ ಜಗಳವಾಡಿಕೊಂಡಿದ್ದಾರೆ.
ಮೀನು ಮಾರುಕಟ್ಟೆಯಲ್ಲಿ ಇಬ್ಬರ ನಡುವೆ ಸಣ್ಣ ವಿಷಯಕ್ಕೆ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಪಟಗಾರ ಅವರು ನೀಡಿದ ದೂರಿನ ಆಧಾರದ ಮೇಲೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ: ಭಾವನಾ ಟಿವಿ ಡೆಸ್ಕ್
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು