October 24, 2026

ಭಟ್ಕಳ: ವಿಷಕಾರಿ ಹಾವು ಕಡಿತಕ್ಕೆ 75 ವರ್ಷದ ವೃದ್ಧೆ ಬಲಿ

ಭಟ್ಕಳ: ಮನೆಯ ಮುಂಭಾಗದ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವು ಕಡಿದು 75 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಮಣ್ಣೊಂಡದಲ್ಲಿ ನಡೆದಿದೆ.

ಮೃತರನ್ನು ಮಣ್ಣೊಂಡ ನಿವಾಸಿ ನಾಗಮ್ಮ ದುರ್ಗಪ್ಪ ನಾಯ್ಕ (75) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ನಾಗಮ್ಮ ಅವರು ಮನೆಯ ಮುಂಭಾಗದ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವೊಂದು ಕಡಿದಿದೆ. ತಕ್ಷಣವೇ ಅವರನ್ನು ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ತಮ್ಮ ಮಂಜುನಾಥ್ ನಾಯ್ಕ್ ಅವರು ನೀಡಿದ ದೂರಿನ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಪರಿಶೀಲನೆ ಕೈಗೊಂಡಿದ್ದಾರೆ.

ವರದಿ: ಭಾವನಾ ಟಿವಿ ಡೆಸ್ಕ್

About The Author

error: Content is protected !!