ಭಟ್ಕಳ: ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾತ್ರ ಮಹತ್ವದ್ದು ಎಂದು ಡಾ. ಗೋವಿಂದ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ.
ನಾಗ ಮಾಸ್ತಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಶರನ್ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ವೇದಿಕೆಗೆ ನವರಾತ್ರಿಯ ದ್ವಿತೀಯ ದಿನದಂದು ಚಾಲನೆ ನೀಡಿ ಅವರು ಮಾತನಾಡಿದರು. ಸನಾತನ ಪರಂಪರೆಯ ಪ್ರತೀಕವಾದ ನವರಾತ್ರಿಯಲ್ಲಿ ಧಾರ್ಮಿಕ ಆಚರಣೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂತಹ ವೇದಿಕೆಗಳು ಯುವ ಪ್ರತಿಭೆಗಳ ಲಲಿತಕಲೆಗಳನ್ನು ಅನಾವರಣಗೊಳಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸತೀಶಕುಮಾರ್ ಮಾತನಾಡಿ, ನಾಗ ಮಾಸ್ತಿ ಕ್ಷೇತ್ರದ ಮಹತ್ವ ಹಾಗೂ ಕ್ಷೇತ್ರದ ಪವಾಡಗಳ ಕುರಿತು ವಿವರಿಸಿದರು. ಸಾಂಸ್ಕೃತಿಕ ದಸರಾ ನಮ್ಮ ಸಂಸ್ಕಾರ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವಂತಿರಬೇಕು. ಇಂತಹ ಕಾರ್ಯಕ್ರಮಗಳು ಇಂದಿನ ಯುವಜನತೆಗೆ ಸಂಸ್ಕೃತಿಯ ಅರಿವು ಮೂಡಿಸುವುದರೊಂದಿಗೆ ಬೌದ್ಧಿಕ ಜ್ಞಾನ ವೃದ್ಧಿಗೆ ಪೂರಕವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಅಚ್ಚುತ ಕಾಮತ್ ಹಾಗೂ ಶ್ರೀ ಹೊಗೆವಡ್ಡಿ ಕ್ಷೇತ್ರದ ಧರ್ಮದರ್ಶಿ ಅನಂತ ನಾಯ್ಕ ಉಪಸ್ಥಿತರಿದ್ದು ಮಾತನಾಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ರವೀಂದ್ರ ನಾಯ್ಕ ಸ್ವಾಗತಿಸಿದರು, ರಾಜೇಶ್ ನಾಯ್ಕ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಪೂರ್ಣಿಮಾ ಕರ್ಕಿಕರ್ ಮತ್ತು ಪ್ರತಿಭಾ ಕರ್ಕಿಕರ್ ಕಾರ್ಯಕ್ರಮ ನಿರೂಪಿಸಿದರು.
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ಭಟ್ಕಳದಲ್ಲಿ ಮದ್ಯದ ಅಮಲಿನಲ್ಲಿ ರಂಪಾಟ: ಬಿಯರ್ ಬಾಟಲಿಯಿಂದ ಹಲ್ಲೆ, ಮೂವರಿಗೆ ಗಾಯ