October 22, 2026

ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್

ಭಟ್ಕಳ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಹಾಗೂ ‘ಸಿಎಂ ಕಪ್ ಕರಾಟೆ ಚಾಂಪಿಯನ್‌ಶಿಪ್’ನಲ್ಲಿ ಭಟ್ಕಳದ ಅಂಜುಮನ್ ತಂತ್ರಜ್ಞಾನ ಮತ್ತು ನಿರ್ವಹಣಾ ಸಂಸ್ಥೆಯ (AITM) ಎಂ.ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಶ್ರೀ ಪ್ರವೀಣ್ ರವಿ ಹರಿಜನ್ ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಕರ್ನಾಟಕ ಸರ್ಕಾರದ ವತಿಯಿಂದ ಅಕ್ಟೋಬರ್ 14ರಂದು ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಈ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರವೀಣ್ ತಮ್ಮ ಪ್ರತಿಭೆ ಮೆರೆದಿದ್ದಾರೆ. ಇವರ ಈ ನಿರಂತರ ಶ್ರಮ, ಕ್ರೀಡಾಸಕ್ತಿ ಹಾಗೂ ಹೋರಾಟದ ಮನೋಭಾವ ಇತರರಿಗೆ ಮಾದರಿಯಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಯಶಸ್ವಿ ಕ್ರೀಡಾಪಟುವಿಗೆ ಎಐಟಿಎಂ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಎಂಬಿಎ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕ ವೃಂದದವರು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತುಂಗಕ್ಕೇರಲು ಹೃತ್ಪೂರ್ವಕ ಶುಭ ಹಾರೈಸಿದ್ದಾರೆ.

About The Author

error: Content is protected !!