ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇಲೆ ಯುವಕನೋರ್ವನನ್ನು ಮುರ್ಡೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.

ಮಾವಳ್ಳಿ-೦೧ ಬಸ್ತಿಮಕ್ಕಿ ನಿವಾಸಿ, ಕೂಲಿ ಕಾರ್ಮಿಕ ಮೊಹಮ್ಮದ್ ಅಬಾನ್ (೨೬) ಬಂಧಿತ ಆರೋಪಿ.
ಬಸ್ತಿಮಕ್ಕಿ ಕ್ರಾಸ್ ಸಮೀಪ ಗಾಂಜಾ ಸೇವಿಸಿರುವ ಶಂಕೆಯ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬಿರಾದಾರ ಅವರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ (ಪಾಸಿಟಿವ್ ವರದಿ ಬಂದಿದೆ).
ಈ ಕುರಿತು ಪಿಎಸ್‌ಐ ಹಣಮಂತ ಬಿರಾದಾರ ಅವರು ಸರ್ಕಾರದ ಪರವಾಗಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

About The Author


More Stories
ಸರ್ಪನಕಟ್ಟೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; 51 ವಿದ್ಯಾರ್ಥಿಗಳಿಗೆ ‘ಸುಜ್ಞಾನ ನಿಧಿ’ ವಿತರಣೆ
ರಾಷ್ಟ್ರೀಯ ಪೊಲೀಸ್ ಬೈಕ್ ರ್ಯಾಲಿಗೆ ಅದ್ಧೂರಿ ಸ್ವಾಗತ; ‘ಮಾದಕವಸ್ತು ಮುಕ್ತ ಭಾರತ’ಕ್ಕೆ ಜಾಗೃತಿ
ಶಿರಾಲಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ