ಕೂಡ್ಲಿಗಿ (ವಿಜಯನಗರ): ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಇರುವ ಪಿಎಫ್ ಹಾಗೂ ಗ್ರಾಚ್ಯುಟಿ ಹಣವನ್ನು ತಕ್ಷಣ ಮಂಜೂರು ಮಾಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಹೋರಾಟಗಾರರು ಎಚ್ಚರಿಸಿದ್ದಾರೆ.
ತಮಗಾಗುತ್ತಿರುವ ಅನ್ಯಾಯದ ವಿರುದ್ಧ ನಿವೃತ್ತ ಕಾರ್ಯಕರ್ತೆಯರು ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಆಯೋಗವು, ನಿವೃತ್ತ ಕಾರ್ಯಕರ್ತೆಯರ ಬಾಕಿ ಹಣವನ್ನು ಬಿಡುಗಡೆ ಮಾಡಿ ಮಾಹಿತಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿತ್ತು. ಆದರೆ ಸರ್ಕಾರವಾಗಲಿ, ಇಲಾಖೆಯಾಗಲಿ ಈ ವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಮಾನವ ಹಕ್ಕುಗಳ ಆಯೋಗಕ್ಕೆ ತೋರಿಸಿದ ಅಗೌರವವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ: “ಕಳೆದ ೭-೮ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಇಲಾಖೆ ಕಣ್ಣಿದ್ದು ಕುರುಡನಂತೆ ವರ್ತಿಸುತ್ತಿದೆ. ನಮ್ಮ ಹಕ್ಕಿನ ಹಣ ನಮಗೆ ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
ಅತಿ ಶೀಘ್ರದಲ್ಲಿಯೇ ರಾಜ್ಯಾದ್ಯಂತ ಕರೆ ನೀಡಿ, ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ. (ವರದಿ: ವಿ.ಜಿ. ವೃಷಭೇಂದ್ರ, ಕೂಡ್ಲಿಗಿ)

About The Author


More Stories
ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ ‘ತಾಯಿ-ಮಕ್ಕಳ ಆಸ್ಪತ್ರೆ’ ನಿರ್ಮಾಣಕ್ಕೆ ಸಾರ್ವಜನಿಕರ ಒತ್ತಾಯ – ಶಾಸಕರ ನಿರ್ಧಾರಕ್ಕೆ ಶ್ಲಾಘನೆ
ಶೇ. 33 ಮೀಸಲಾತಿ ನಮ್ಮ ಹಕ್ಕು: ಕೂಡ್ಲಿಗಿಯಲ್ಲಿ ಜನವಾದಿ ಮಹಿಳಾ ಸಂಘದಿಂದ ಬೃಹತ್ ಪ್ರತಿಭಟನೆ ಹಾಗೂ ಹಕ್ಕೊತ್ತಾಯ
ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಸಂಘಟನಾ ಚತುರ, ಅತ್ಯಂತ ಜನಪ್ರಿಯ ಮಾದರಿ ಶಾಸಕ: ಹರ್ಕರ್ ವೇಣುಗೋಪಾಲ್ ರಾವ್ ಬಣ್ಣನೆ