ಭಟ್ಕಳ: ಭಗವದ್ಗೀತೆಯನ್ನು ಸರಿಯಾಗಿ ತಿಳಿದುಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಎಂತಹ ಸಮಸ್ಯೆಗಳನ್ನಾದರೂ ಎದುರಿಸಬಹುದು ಎಂದು ಭಟ್ಕಳ ಎಜ್ಯುಕೇಷನ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ ನಾಯಕ ತಿಳಿಸಿದ್ದಾರೆ.
ಅವರು ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ಹಾಗೂ ಗಜಾನನ ಗಣಪತಿ ಕೊಲ್ಲೆ ರಾಯ್ಕರ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಬೈಂದೂರು, ಭಟ್ಕಳ, ಹೊನ್ನಾವರ, ಕುಮಟಾ ಮತ್ತು ಅಂಕೋಲಾ ತಾಲೂಕುಗಳ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ 6ನೇ ವರ್ಷದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ವರ್ಷ ಒಟ್ಟು 37 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ಸ್ಪರ್ಧಿಗಳಿಗೆ ಒಟ್ಟು ರೂ. 1,40,000 ನಗದು ಬಹುಮಾನವನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಟ್ಕಳ ಎಜ್ಯುಕೇಷನ್ ಟ್ರಸ್ಟ್ನ ಟ್ರಸ್ಟಿ ರಮೇಶ ಸಾವಿsರ್ ಉಪಸ್ಥಿತರಿದ್ದರು. ಇದೇ ವೇಳೆ ನ್ಯೂ ಇಂಗ್ಲಿಷ್ ಹೈಸ್ಕೂಲ್ನ ನಿವೃತ್ತ ಮುಖ್ಯೋಪ್ಯಾಧ್ಯಾಯ ಗಣಪತಿ ಶಿರೂರು ಹಾಗೂ ಶ್ರೀ ಗುರು ವಿದ್ಯಾದಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಚಾರ್ಯ ಡಾ. ವೀರೇಂದ್ರ ವಿ. ಶಾನ್ಭಾಗ್ ಉಪಸ್ಥಿತರಿದ್ದು ಮಾತನಾಡಿದರು.

ಕಾರ್ಯಕ್ರಮವನ್ನು ನ್ಯೂ ಇಂಗ್ಲಿಷ್ ಹೈಸ್ಕೂಲ್ನ ಮುಖ್ಯೋಪ್ಯಾಧ್ಯಾಯ ಶರತ್ ಗುನಗಿ ನಿರ್ವಹಿಸಿದರು, ವಿದ್ಯಾಭಾರತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪ್ಯಾಧ್ಯಾಯಿನಿ ರೂಪಾ ರಮೇಶ್ ವಂದನಾರ್ಪಣೆಗೈದರು.
About The Author


More Stories
ಭಟ್ಕಳದಲ್ಲಿ ನಾಲ್ಕನೇ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಿಲಾನ್ಯಾಸ
‘ಸಂಭವಾಮಿ ಯುಗೇ ಯುಗೇ – ಕಮಲಿ ಕಲ್ಯಾಣ’ ನಾಟಕದ ಪೋಸ್ಟರ್ ಬಿಡುಗಡೆ
ಹೆದ್ದಾರಿ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಸ್ಕೂಲ್ ವ್ಯಾನ್ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು