ಉಪಾಧ್ಯಕ್ಷರಾಗಿ ವಿನಾಯಕ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ ನಾಯ್ಕ ನೇಮಕ
ಭಟ್ಕಳ: ಪಟ್ಟಣದ ಆಸರಕೇರಿಯ ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನದ ೧೮ ಕೂಟದ ನಾಮಧಾರಿ ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ವಿನಾಯಕ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಸರಕೇರಿಯ ವೆಂಕಟೇಶ ನಾಯ್ಕ ಆಯ್ಕೆಯಾಗಿದ್ದಾರೆ. ಪಟ್ಟಣದ ಆಸರಕೇರಿಯ ನಿಚ್ಚಲಮಕ್ಕಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು.

ಧಾರ್ಮಿಕ-ಸಾಮಾಜಿಕ ಕಾರ್ಯಕ್ರಮಗಳ ನೇತೃತ್ವ: ಭಟ್ಕಳ ನಾಮಧಾರಿ ಸಮಾಜದ ೧೮ ಕೂಟದಿಂದ ಪ್ರತಿ ಮೂರು ವರ್ಷಕ್ಕೊಮ್ಮೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ನೂತನ ಸಮಿತಿಯು ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನದ ಪಾಲಕಿ ಉತ್ಸವ, ಕಾರ್ತಿಕ ಉತ್ಸವ ಸೇರಿದಂತೆ ಸಮಾಜದ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ನೇತೃತ್ವ ವಹಿಸಲಿದೆ.
ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ನಿವೃತ್ತ ನ್ಯಾಯಾಧೀಶ ರವಿ ನಾಯ್ಕ ಹಾಗೂ ಪಿಯು ಕಾಲೇಜಿನ ನಿವೃತ್ತ ಪ್ರಾಚಾರ್ಯ ಗಜಾನನ ನಾಯ್ಕ ಪಾಲ್ಗೊಂಡಿದ್ದರು.
ಸಭೆಯಲ್ಲಿ ಸಮಾಜದ ಹಾಲಿ ಅಧ್ಯಕ್ಷ ಅರುಣ ನಾಯ್ಕ, ಕಾರ್ಯದರ್ಶಿ ಡಿ.ಎಲ್. ನಾಯ್ಕ, ಉಪಾಧ್ಯಕ್ಷ ಎಂ.ಕೆ. ನಾಯ್ಕ ಹಾಗೂ ಸದಸ್ಯ ಆರ್.ಜಿ. ನಾಯ್ಕ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

More Stories
ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಬಿ.ವಿ. ರಾಹುಲ್ಗೆ ಚಿನ್ನದ ಪದಕ; ರಾಷ್ಟ್ರ ಮಟ್ಟಕ್ಕೆ ಆಯ್ಕೆ
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ