November 22, 2026

ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಲಕಾವೇರಿ ತೀರ್ಥ ಪ್ರಸಾದ ವಿತರಿಸಿದ ಭಾಗಮಂಡಲ ದೇವಾಲಯ ಸಮಿತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನೂತನ ಅಧ್ಯಕ್ಷ ಬಾನಂಡ ಪ್ರಥ್ಯು ನೇತೃತ್ವದ ನಿಯೋಗ

ಭಾಗಮಂಡಲ: ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಬಾನಂಡ ಪ್ರಥ್ಯು ಹಾಗೂ ಸದಸ್ಯರ ತಂಡ ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಾಡಿನ ಜೀವನದಿ ತಾಯಿ ಕಾವೇರಿಯ ಪವಿತ್ರ ತೀರ್ಥೋದ್ಭವದ ಪ್ರಸಾದವನ್ನು ವಿತರಿಸಿತು.

ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಮಾರ್ಗದರ್ಶನದಂತೆ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಟಾಟು ಮೊಣ್ಣಪ್ಪ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

About The Author

error: Content is protected !!