ಕ್ರೀಡೆಯು ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆ: ಸಿ.ಎಸ್. ಅರುಣ್ ಮಾಚಯ್ಯ
ಪೊನ್ನಂಪೇಟೆ: ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಯುವ ಘಟಕ, ಮಹಿಳಾ ಘಟಕ ಹಾಗೂ ಮಡಿಕೇಬೀದಿನ ಕುಲಾಲ ಕುಂಬಾರ ಬಾಂಧವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ‘ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-೨’ ಕ್ರೀಡಾಕೂಟಕ್ಕೆ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, “ಕ್ರೀಡೆಯು ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ. ಯುವಜನತೆ ಇಂತಹ ಕ್ರೀಡಾಕೂಟಗಳ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಮಟ್ಟದ ಉದ್ಯೋಗಾವಕಾಶಗಳನ್ನು ಪಡೆಯಲು ಮುಂದಾಗಬೇಕು” ಎಂದು ಕರೆ ನೀಡಿ ಶುಭ ಹಾರೈಸಿದರು.

ಸಮುದಾಯದ ಬಾಂಧವ್ಯ ವೃದ್ಧಿಗೆ ಕ್ರೀಡಾಕೂಟ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್ ಮಾತನಾಡಿ, “ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಜೊತೆಗೆ ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ” ಎಂದರು.
ಗಣ್ಯರ ಉಪಸ್ಥಿತಿ: ಸಮಾರಂಭದಲ್ಲಿ ಭಾಗಮಂಡಲ ತಲಕಾವೇರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾನಂಡ ಪ್ರತ್ಯು, ಗ್ರಾ.ಪಂ. ಮಾಜಿ ಅಧ್ಯಕ್ಷ ಟಾಟೂ ಮೊಣ್ಣಪ್ಪ, ಮಾಜಿ ಸದಸ್ಯರಾದ ಸಿ.ಕೆ. ಪ್ರದೀಪ್, ಎ.ಎಸ್. ನಾಚಯ್ಯ, ಮಾಯಮುಡಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಮ್ಮ, ಶಿಕ್ಷಕಿ ರಾಗಿಣಿ, ಸಂಘದ ಉಪಾಧ್ಯಕ್ಷ ಎಂ.ಡಿ. ಸುರೇಶ್ ಕುಲಾಲ್, ಖಜಾಂಚಿ ಕೆ.ಎಸ್. ಗಿರೀಶ್, ಯುವ ಘಟಕದ ಅಧ್ಯಕ್ಷ ಜಿ.ಪಿ. ಕುಲಾಲ್, ಉಪಾಧ್ಯಕ್ಷ ಪವನ್ ಕುಲಾಲ್, ಕ್ರೀಡಾಧ್ಯಕ್ಷ ಎಂ.ಡಿ. ಶಾಂತಕುಮಾರ್, ಪ್ರಮುಖರಾದ ಅಶ್ವತ್ ಮಡಿಕೇಬೀಡು, ಸಂಘದ ಪದಾಧಿಕಾರಿ ಚಿನ್ನಪ್ಪ, ಕುಲಾಲ ಕುಂಬಾರ ಸಂಘದ ಅಧ್ಯಕ್ಷ ಶಿವ, ಶ್ರೀ ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಮಡಿಕೇಬೀಡಿನ ಕುಲಾಲ ಕುಂಬಾರ ಸಂಘದ ಪದಾಧಿಕಾರಿಗಳು ಹಾಗೂ ಕುಲಬಾಂಧವರು ಉಪಸ್ಥಿತರಿದ್ದರು.
ನ.೧ರಂದು ಸಮಾರೋಪ ಸಮಾರಂಭ: ನವೆಂಬರ್ ೧ರಂದು ಸಂಜೆ ೫ ಗಂಟೆಗೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಲಯನ್ ದಾಮೋದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೇತಿರ ಧರ್ಮಜ ಉತ್ತಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
– ಪ್ರಿತುನ್ ಪೂವಣ್ಣ, ಭಾವನಾ ಟಿವಿ (ಕೊಡಗು)

More Stories
ಕರವೇ ತಾಲೂಕು ಘಟಕದ ಮಾಸಿಕ ಸಭೆ; ನೂತನ ಸದಸ್ಯರ ಸೇರ್ಪಡೆ
ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಕಾಂಗ್ರೆಸ್ಗೆ ಪ್ರಮುಖರ ಸೇರ್ಪಡೆ