November 22, 2026

ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿಯಾದ ನೂತನ ಉಪ ವಿಭಾಗಾಧಿಕಾರಿ ಬಸನಗೌಡ ಕೋಟೂರ

ಕಂದಾಯ ಕಡತಗಳನ್ನು ವಿಳಂಬವಿಲ್ಲದೆ ತ್ವರಿತವಾಗಿ ಇತ್ಯರ್ಥಪಡಿಸಲು ಎಸಿಗೆ ಶಾಸಕರ ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿಯಾಗಿ (AC) ಅಧಿಕಾರ ಸ್ವೀಕರಿಸಿರುವ ಬಸನಗೌಡ ಕೋಟೂರ ಅವರು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಮಡಿಕೇರಿಯ ಸರ್ಕಾರಿ ಅತಿಥಿಗೃಹದಲ್ಲಿ ಸೌಹಾರ್ದಯುತವಾಗಿ ಭೇಟಿಯಾದರು.

ಈ ಸಂದರ್ಭದಲ್ಲಿ ಜಿಲ್ಲೆಯ ಕಂದಾಯ ವಿಷಯಗಳ ಕುರಿತು ಶಾಸಕರು ನೂತನ ಅಧಿಕಾರಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು. “ಕೊಡಗಿನ ಕಂದಾಯ ದಾಖಲೆಗಳ ಸ್ವರೂಪಕ್ಕೂ ಹಾಗೂ ರಾಜ್ಯದ ಇತರ ಜಿಲ್ಲೆಗಳ ಕಂದಾಯ ದಾಖಲೆಗಳಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಆದ್ದರಿಂದ ಕಂದಾಯ ವಿಷಯಗಳಿಗೆ ಸಂಬಂಧಿಸಿದಂತೆ ತಾಲೂಕು ಆಡಳಿತವು ಅತ್ಯಂತ ಎಚ್ಚರಿಕೆ ಹಾಗೂ ಸೂಕ್ಷ್ಮತೆಯಿಂದ ವ್ಯವಹರಿಸಬೇಕು” ಎಂದು ಪೊನ್ನಣ್ಣ ಸಲಹೆ ನೀಡಿದರು.

ಜೊತೆಗೆ, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಸಾರ್ವಜನಿಕರು ಸಲ್ಲಿಸುವ ಯಾವುದೇ ಅರ್ಜಿ ಹಾಗೂ ಕಡತಗಳನ್ನು ಅನಗತ್ಯವಾಗಿ ವಿಳಂಬ ಮಾಡದೆ ತ್ವರಿತವಾಗಿ ಇತ್ಯರ್ಥಪಡಿಸಿ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ನೂತನ ಉಪ ವಿಭಾಗಾಧಿಕಾರಿಗೆ ಶಾಸಕರು ಸೂಚನೆ ನೀಡಿದರು.

– ವರದಿ: ಪ್ರಿತುನ್ ಪೂವಣ್ಣ, ಕೊಡಗು

About The Author

error: Content is protected !!