November 22, 2026

ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಪ್ರಮುಖರ ಸೇರ್ಪಡೆ

ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿಕೊಂಡ ೧೫ಕ್ಕೂ ಹೆಚ್ಚು ಮುಖಂಡರು

ಪೊನ್ನಂಪೇಟೆ (ಕೊಡಗು): ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಕಾರ್ಯವೈಖರಿ ಹಾಗೂ ಕ್ಷೇತ್ರದಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ನಿಟ್ಟೂರು ಭಾಗದ ೧೫ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪೊನ್ನಂಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರು ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಕಾಂಗ್ರೆಸ್ ಶಾಲನ್ನು ಹೊದಿಸಿ, ಪಕ್ಷದ ಧ್ವಜ ನೀಡಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸದಸ್ಯರು, “ಕ್ಷೇತ್ರದಾದ್ಯಂತ ಶಾಸಕ ಪೊನ್ನಣ್ಣ ಅವರು ಕೈಗೊಳ್ಳುತ್ತಿರುವ ಜನಪರ ಚಿಂತನೆ ಹಾಗೂ ನಿರಂತರ ಅಭಿವೃದ್ಧಿ ಕಾಮಗಾರಿಗಳು ನಮಗೆ ಪ್ರೇರಣೆಯಾಗಿವೆ. ಶಾಸಕರ ಕೈಬಲಪಡಿಸುವ ಉದ್ದೇಶದಿಂದಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇವೆ” ಎಂದು ತಿಳಿಸಿದರು.

ಪ್ರಮುಖ ನಾಯಕರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಪವನ್ ಚಿಟ್ಟಿಯಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಹಾಗೂ ಬಗರ್ ಹುಕುಂ ಸಮಿತಿ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ ಉಪಸ್ಥಿತರಿದ್ದರು.

ಜೊತೆಗೆ ಹುದಿಕೇರಿ ವಲಯ ಅಧ್ಯಕ್ಷ ಚಂಗುಲಂಡ ಸೂರಜ್, ಟಿ. ಶೆಟ್ಟಿಗೇರಿ ವಲಯ ಅಧ್ಯಕ್ಷ ತಿತೀರ ಪ್ರಭು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಂ. ಬಾಲಕೃಷ್ಣ, ಪ್ರಮುಖರಾದ ಮುಕಟೀರ ಸಂದೀಪ್, ಅಪ್ಪಚಂಗಡ ಮೋಟಯ್ಯ, ಬುಟ್ಟಿಯಂಡ ತಂಬಿ, ಚೊಟ್ಟೆಯಂಡಮಾಡ ಉದಯ, ತಿತೀರ ಚೋಂದಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಭವಿನ್ ಕುಶಾಲಪ್ಪ ಹಾಗೂ ಫಾರ್ದಿನ್ ಸೇರಿದಂತೆ ಹಲವು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

– ವರದಿ: ಪ್ರಿತುನ್ ಪೂವಣ್ಣ, ಕೊಡಗು

About The Author

error: Content is protected !!