ಕಂಪ್ಯೂಟರ್ ಸೈನ್ಸ್, ಎಐಎಂಎಲ್ ಹಾಗೂ ಡೇಟಾ ಸೈನ್ಸ್ ವಿಭಾಗದ ಶೈಕ್ಷಣಿಕ ಸಾಧಕರಿಗೆ ಸನ್ಮಾನ
ಭಟ್ಕಳ: ತಾಲೂಕಿನ ಪ್ರಸಿದ್ಧ ಅಂಜುಮಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (AITM) ಕಾಲೇಜಿನ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (AIML) ಹಾಗೂ ಡೇಟಾ ಸೈನ್ಸ್ (DS) ವಿಭಾಗದ ವಿದ್ಯಾರ್ಥಿಗಳ ಸಾಮರ್ಥ್ಯ, ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಪೋಷಿಸುವ ಉದ್ದೇಶದಿಂದ ‘NOVA’ ಎಂಬ ನೂತನ ವೇದಿಕೆಯನ್ನು (ಫೋರಮ್) ಪ್ರಾರಂಭಿಸಲಾಗಿದೆ.


ಕಾಲೇಜು ಆವರಣದಲ್ಲಿ ನವೆಂಬರ್ ೩ರಂದು ನಡೆದ ‘NOVA’ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಇಸ್ಮಾಯಿಲ್ ಜೋರೆಜ್ ಭಾಗವಹಿಸಿ ಚಾಲನೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು, ಹೊಸ ಉಪಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ವಿವಿಧ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಜ್ಞಾನ ವಿನಿಮಯ ಮಾಡಿಕೊಳ್ಳಲು ‘NOVA’ ವೇದಿಕೆಯು ಅತ್ಯುತ್ತಮ ವೇದಿಕೆಯಾಗಲಿದೆ ಎಂದು ಸಂಘಟಕರು ತಿಳಿಸಿದರು.
ಸಾಧಕ ವಿದ್ಯಾರ್ಥಿಗಳಿಗೆ ಗೌರವ: ಕಾರ್ಯಕ್ರಮದ ಭಾಗವಾಗಿ AIML ಮತ್ತು DS ವಿಭಾಗದ ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಅಂಕ ಗಳಿಸಿ ಸಾಧನೆ ಮಾಡಿದ ಪ್ರಮುಖ (ಟಾಪರ್) ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಅಲ್ಲದೆ, ಫೋರಮ್ ಉದ್ಘಾಟನೆ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಫಜ್ಲುರ್ ರೆಹಮಾನ್, ವಿಭಾಗ ಮುಖ್ಯಸ್ಥರಾದ ಡಾ. ಅನ್ವರ್ ಶತಿಕ್, ಅಧ್ಯಾಪಕ ಸಂಯೋಜಕಿ ಶ್ರಾವ್ಯ ಹಾಗೂ ‘NOVA’ ವೇದಿಕೆಯ ಅಧ್ಯಕ್ಷ ಅಬ್ದುಲ್ ಖಾದಿರ್ ಸೇರಿದಂತೆ ವಿವಿಧ ವಿಭಾಗಗಳ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!