ಅನುಗ್ರಹ ಬಡಾವಣೆಯಲ್ಲಿ ₹1 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಿಂದ ಚಾಲನೆ
ವಿರಾಜಪೇಟೆ (ಕೊಡಗು): ಗೋಣಿಕೊಪ್ಪದ ಅನುಗ್ರಹ ಬಡಾವಣೆಯ ನಿವಾಸಿಗಳಿಗೆ ಮಳೆಗಾಲದಲ್ಲಿ ಎದುರಾಗುತ್ತಿದ್ದ ಪ್ರವಾಹದ ಭೀತಿಯನ್ನು ತಪ್ಪಿಸುವ ನಿಟ್ಟಿನಲ್ಲಿ ₹1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕೀರೆಹೊಳೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಬಡಾವಣೆಯ ನಾಗರಿಕರ ಬಹುದಿನಗಳ ಬೇಡಿಕೆಯಾಗಿದ್ದ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಸಮಾರಂಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಹಿಳಾ ಬ್ಲಾಕ್ ಅಧ್ಯಕ್ಷೆ ಆಶಾ ಪೂಣಚ್ಚ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು ಉಪಸ್ಥಿತರಿದ್ದರು.
ಅಲ್ಲದೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪಂಕಜ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ನೂರೇರಾ ಪದವಿ ಧನ್ಯ, ಪ್ರಮುಖರಾದ ವಿ.ಟಿ. ವಾಸು, ಧ್ಯಾನ್, ನಾಯಂದಿರ ಶಿವಾಜಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.
– ವರದಿ: ಪ್ರಿತುನ್ ಪೂವಣ್ಣ, ಕೊಡಗು

More Stories
ವಿರಾಜಪೇಟೆ: ಸಿದ್ದಾಪುರದಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ
ಪವಿತ್ರ ಕೆ.ಬಿ. ಅವರಿಗೆ ‘ಯೋಗ ಜ್ಯೋತಿ ಪ್ರಶಸ್ತಿ – ೨೦೨೬’ ಗೌರವ
ಕೊಯನಾಡು ರಬ್ಬರ್ ಎಸ್ಟೇಟ್ ರಸ್ತೆ ಕಾಮಗಾರಿಗೆ ಚಾಲನೆ: ಶಾಸಕ ಪೊನ್ನಣ್ಣ ವಿಶೇಷ ಅನುದಾನದಿಂದ ಕಾಂಕ್ರೀಟೀಕರಣ