November 22, 2026

ಮಂಕಿ: ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ

ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣ ಬೆಳೆಸುತ್ತವೆ: ಡಿವೈಎಸ್ಪಿ ಗಿರೀಶ್ ಎಸ್.ವಿ.

ಮಂಕಿ (ಹೊನ್ನಾವರ): ತಾಲೂಕಿನ ಮಂಕಿಯಲ್ಲಿರುವ ‘ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್’ನಲ್ಲಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ನವೆಂಬರ್ ೬ರಂದು ಅತ್ಯಂತ ಸಂಭ್ರಮ ಹಾಗೂ ಶ್ರದ್ಧಾ ಉತ್ಸಾಹಗಳಿಂದ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಟ್ಕಳ ಉಪ ಪೊಲೀಸ್ ಅಧೀಕ್ಷಕ (ಡಿವೈಎಸ್ಪಿ) ಗಿರೀಶ್ ಎಸ್.ವಿ. ಅವರು ಧ್ವಜಾರೋಹಣ ನೆರವೇರಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಠ್ಯದ ಜೊತೆಗೆ ಕ್ರೀಡೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿವೆ. ಕ್ರೀಡಾ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ತಂಡವಾಗಿ ಕೆಲಸ ಮಾಡುವ ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಶಾಲೆಯ ಅಧ್ಯಕ್ಷ ಎ.ಆರ್. ನಾಯಕ್ ಹಾಗೂ ಪ್ರಾಂಶುಪಾಲೆ ಸವಿತಾ ಪವಾರ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ವಿವಿಧ ಓಟ, ಹಾರಟ ಹಾಗೂ ಮೈದಾನ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಸಮಾರಂಭದಲ್ಲಿ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರು.

About The Author

error: Content is protected !!