ಹೆಬಳೆ ಹೊನ್ನೆಗದ್ದೆ–ತೆಂಗಿನಗುಂಡಿ ರಸ್ತೆಯಲ್ಲಿ ಘಟನೆ; ಚಿಕಿತ್ಸೆ ಫಲಕಾರಿಯಾಗದೆ 33 ವರ್ಷದ ಯುವಕ ಮೃತ್ಯು
ಭಟ್ಕಳ: ಸ್ಕೂಟಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯಗೊಂಡಿದ್ದ ಮೀನುಗಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಹೆಬಳೆ ಗ್ರಾಮದ ಹೊನ್ನೆಗದ್ದೆ–ತೆಂಗಿನಗುಂಡಿ ರಸ್ತೆಯಲ್ಲಿ ಸಂಭವಿಸಿದೆ.


ಮೃತರನ್ನು ಭಟ್ಕಳ ತಾಲೂಕಿನ ನೆರಳೇಸರ ವೆಂಕ್ಟಾಪುರ ನಿವಾಸಿ ಲೋಕೇಶ ಪಾಂಡುರಂಗ ಮೋಗೇರ (33) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಲೋಕೇಶ ಅವರು ತಮ್ಮ (ಕೆಎ-47/ಡಬ್ಲ್ಯೂ-2499) ನೋಂದಣಿ ಸಂಖ್ಯೆಯ ಸ್ಕೂಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ-66ರ ಕಡೆಯಿಂದ ತೆಂಗಿನಗುಂಡಿ ಮಾರ್ಗವಾಗಿ ಸಂಚರಿಸುತ್ತಿದ್ದರು. ಈ ವೇಳೆ ಹೆಬಳೆ ಗ್ರಾಮದ ಹೊನ್ನೆಗದ್ದೆ ಸಮೀಪ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಸಮೇತ ರಸ್ತೆಗೆ ಅಪ್ಪಳಿಸಿದ್ದಾರೆ.
ಅಪಘಾತದ ರಭಸಕ್ಕೆ ಲೋಕೇಶ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಮೃತರ ಪರಿಚಯಸ್ಥ ದಿನಕರ ತಮ್ಮಯ್ಯ ಮೋಗೇರ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!