November 22, 2026

ಭಟ್ಕಳ: ಚೆಸ್‌ನಲ್ಲಿ ‘ಯುನಿವರ್ಸಿಟಿ ಬ್ಲೂ’ ಗೌರವ; ಶ್ರೀ ಗುರು ಸುಧೀಂದ್ರ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರ ಸಾಧನೆ

ಪೂಜಾ ಖಾರ್ವಿ ಹಾಗೂ ಧೃತಿ ನಾಯ್ಕ ಆಯ್ಕೆ; ಹೈದರಾಬಾದ್‌ನಲ್ಲಿ ನಡೆದ ಅಂತರ ವಿವಿ ದಕ್ಷಿಣ ವಲಯ ಟೂರ್ನಿಯಲ್ಲಿ ಕವಿವಿ ಪ್ರತಿನಿಧಿಸಿದ ಪ್ರತಿಭೆಗಳು

ಭಟ್ಕಳ (ಉತ್ತರ ಕನ್ನಡ): ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಚೆಸ್ (ಚದುರಂಗ) ಕ್ರೀಡಾಕೂಟದಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿನಿಯರಾದ ಪೂಜಾ ಖಾರ್ವಿ ಹಾಗೂ ಧೃತಿ ನಾಯ್ಕ ‘ಯುನಿವರ್ಸಿಟಿ ಬ್ಲೂ’ (University Blue) ಆಗಿ ಆಯ್ಕೆಯಾಗುವ ಮೂಲಕ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಿಶ್ವವಿದ್ಯಾಲಯ ಮಟ್ಟದ ಆಯ್ಕೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಈ ಇಬ್ಬರು ವಿದ್ಯಾರ್ಥಿನಿಯರು, ತೆಲಂಗಾಣದ ಹೈದರಾಬಾದ್‌ನ ವೊಕ್ಸನ್ (Woxsen) ವಿಶ್ವವಿದ್ಯಾಲಯದಲ್ಲಿ ನಡೆದ ಅಂತರ ವಿಶ್ವವಿದ್ಯಾಲಯ ದಕ್ಷಿಣ ಭಾರತ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ತಂಡವನ್ನು ಪ್ರತಿನಿಧಿಸಿದ್ದಾರೆ.

ವಿದ್ಯಾರ್ಥಿನಿಯರ ಈ ಗಮನಾರ್ಹ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ದೈಹಿಕ ಶಿಕ್ಷಣ ನಿರ್ದೇಶಕರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಿಂಚಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

About The Author

error: Content is protected !!