17 ವರ್ಷ ವಯೋಮಿತಿ ಒಳಗಿನ -66 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ; ಆನಂದ್ ಆಶ್ರಮ ಶಾಲೆ ಹಾಗೂ ತಾಲೂಕಿಗೆ ಕೀರ್ತಿ
ಭಟ್ಕಳ (ಉತ್ತರ ಕನ್ನಡ): ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ಇವರ ಸಂಯುಕ್ತ ಆಶ್ರಯದಲ್ಲಿ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಚಾಂಪಿಯನ್ಶಿಪ್-2026ರಲ್ಲಿ ಭಟ್ಕಳದ ವಿದ್ಯಾರ್ಥಿ ಬಿ.ವಿ. ರಾಹುಲ್ ಚಿನ್ನದ ಪದಕ ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮಹತ್ವದ ಗೆಲುವಿನೊಂದಿಗೆ ರಾಹುಲ್ ಮುಂದಿನ ರಾಷ್ಟ್ರೀಯ ಮಟ್ಟದ ಟೂರ್ನಿಗೆ ಅರ್ಹತೆ ಪಡೆದುಕೊಂಡಿದ್ದಾರೆ.

ನವೆಂಬರ್ 21 ಮತ್ತು 22ರಂದು ನಡೆದ ಈ ಪ್ರತಿಷ್ಠಿತ ರಾಜ್ಯ ಮಟ್ಟದ ಕ್ರೀಡಾಕೂಟದ 17 ವರ್ಷ ವಯೋಮಿತಿ ಒಳಗಿನ -66 ಕೆಜಿ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಿ.ವಿ. ರಾಹುಲ್, ಎದುರಾಳಿಗಳನ್ನು ಮಣಿಸಿ ಪ್ರಥಮ ಸ್ಥಾನದೊಂದಿಗೆ ಸ್ವರ್ಣ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಭಟ್ಕಳದ ಆನಂದ್ ಆಶ್ರಮ ಕಾನ್ವೆಂಟ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿರುವ ರಾಹುಲ್, ಭಟ್ಕಳದ ಯುವ ಉದ್ಯಮಿ ಹಾಗೂ ನಾಮಧಾರಿ ಸಮಾಜದ ಉಪಾಧ್ಯಕ್ಷ ವಿನಾಯಕ್ ನಾಯ್ಕ್ ಮತ್ತು ಕಮಲಾ ನಾಯ್ಕ್ ದಂಪತಿಯ ಪುತ್ರರಾಗಿದ್ದಾರೆ.
ರಾಜ್ಯ ಮಟ್ಟದಲ್ಲಿ ಚಿನ್ನದ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಬಿ.ವಿ. ರಾಹುಲ್ ಅವರಿಗೆ ಆನಂದ್ ಆಶ್ರಮ ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ಕ್ರೀಡಾ ತರಬೇತುದಾರರು ಹಾಗೂ ಭಟ್ಕಳದ ಕ್ರೀಡಾಭಿಮಾನಿಗಳು ಮತ್ತು ಸಾರ್ವಜನಿಕರು ಹಾರ್ದಿಕ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಮಟ್ಟದಲ್ಲೂ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದ್ದಾರೆ.

More Stories
ಆನಂತವಾಡಿ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ರೈಲಿನಿಂದ ಬಿದ್ದು ಸಾವು ಶಂಕೆ
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ